ಪ್ರಧಾನ ಸುದ್ದಿ

ಹದಿನಾಲ್ಕು ವರ್ಷ ಬಳಿಕ ಭಾರತ-ಪಾಕ್ ಸೇನೆ ಸಭೆ

Published On :

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯಲ್ಲಿ ಶಾಂತಿ ಕಾಪಾಡಲು ಹಾಗೂ ಅಲ್ಲಿ ಮತ್ತೆ ಸಹಜಸ್ಥಿತಿ ನಿರ್ಮಾಣವಾಗುವಂತೆ ಮಾಡಲು ಭಾರತ-ಪಾಕ್ ಸಮ್ಮತಿ ವ್ಯಕ್ತಪಡಿಸಿವೆ. ಬರೋಬ್ಬರಿ 14 ವರ್ಷ ಬಳಿಕ ಭಾರತ ಮತ್ತು ಪಾಕಿಸ್ತಾನದ ಸೇನಾ ಕಾರ್ಯಾಚರಣೆಯ ಪ್ರಧಾನ ನಿರ್ದೇಶಕರ (ಡಿಜಿಎಂಓ) ನಡುವಿನ ಮುಖಾಮುಖಿ ಮಾತುಕತೆಯು ವಾಘಾ-ಅಟ್ಟಾರಿ ಗಡಿಯಲ್ಲಿ ಮಂಗಳವಾರ ನಡೆಯಿತು.
 ಗಡಿ ನಿಯಂತ್ರಣ ರೇಖೆಯಲ್ಲಿನ ಉದ್ವಿಗ್ನತೆಯನ್ನು ಶಮನಗೊಳಿಸುವ ಹಾಗೂ ಶಾಂತಿ ಕಾಪಾಡುವ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಮಾತುಕತೆ ನಡೆಸಲಾಯಿತು. ಗಡಿಯಲ್ಲಿ ಕದನ ವಿರಾಮ ಒಪ್ಪಂದವನ್ನು ಪಾಲಿಸುವಂತೆ  ಭಾರತವು ಪಾಕಿಸ್ತಾನವನ್ನು ಒತ್ತಾಯಿಸಿತು.
 ಭಾರತದ ಕಡೆಯಿಂದ ಲೆಫ್ಟಿನೆಂಟ್ ಜನರಲ್ ವಿನೋದ್ ಭಾಟಿಯಾ ಹಾಗೂ ಪಾಕ್ ಕಡೆಯಿಂದ ಮೇಜರ್ ಜ. ಅಮೇರ್ ರಿಯಾಜ್ ಮಾತುಕತೆಯಲ್ಲಿ ಪಾಲ್ಗೊಂಡರು. ಇವರಲ್ಲದೆ, ಎರಡೂ ರಾಷ್ಟ್ರಗಳ ಈ ಹಿಂದೆ ಅಂದರೆ 1999ರಲ್ಲಿ ಕಾರ್ಗಿಲ್ ಯುದ್ಧದ ಬಳಿಕ ಡಿಜಿಎಂಓ ಮಟ್ಟದ ಮಾತುಕತೆ ನಡೆದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.