ಪ್ರಧಾನ ಸುದ್ದಿ

ಬೈಕ್‌ಗೆ ಕ್ಯಾಂಟರ್ ಡಿಕ್ಕಿ ; ನಾಲ್ಕು ಸಾವು

ಬೈಕ್‌ಗೆ ಕ್ಯಾಂಟರ್ ಡಿಕ್ಕಿ ; ನಾಲ್ಕು ಸಾವು
Published On :

ಕನ್ನಡಪ್ರಭ ವಾರ್ತೆ, ತುಮಕೂರು, ಡಿ.25-
ಬೈಕ್‌ಗೆ ಹಿಂದಿನಿಂದ ಬಂದ ಕ್ಯಾಂಟರ್ ಗುದ್ದಿದ ಪರಿಣಾಮ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟ ಘಟನೆ ತುಮಕೂರು ಹೊರ ವಲಯದ ಅಚ್ಚಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಜೆ ಸಂಭವಿಸಿದೆ.
ತುಮಕೂರಿನ ಟಿಪ್ಪು ನಗರದ ಅಜ್ಗರ್ ಪತ್ನಿ ರಜಿಯಾ(25), ಮಕ್ಕಳಾದ ಮೆಹಕ್(9), ಸುನೀರ್(7) ಮತ್ತು ಸಮ್ರೀನ್(2) ಮೃತಪಟ್ಟ ದುರ್ದೈವಿಗಳು. ಅಜ್ಗರ್ ಮತ್ತು ಆಸಿಫ್ (6) ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲಾ ಕ್ರಿಸ್‌ಮಸ್ ರಜಾ ದಿನವಾಗಿರುವುದರಿಂದ ಕುಟುಂಬ ಸಮೇತ ಒಂದೇ ಬೈಕ್‌ನಲ್ಲಿ ಶಿರಾ ನಗರಕ್ಕೆ ತೆರಳುತ್ತಿದ್ದರು. ಮನೆಯಿಂದ ಹೊರಟ ಕೆಲವೇ ಹೊತ್ತಿನಲ್ಲಿ ಹಿಂದಿನಿಂದ ಯಮಸ್ವರೂಪಿಯಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕಾಗಮಿಸಿದ ಕೋರಾ ಪೊಲೀಸರು ಶವಗಳನ್ನು ಹೊರತೆಗೆದು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಎಸ್ಪಿ ರಮಣ್‌ಗುಪ್ತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.