ಪ್ರಧಾನ ಸುದ್ದಿ

ತಪ್ಪಾಗಿ ಅರ್ಥೈಸಬೇಡಿ: ಪರಮೇಶ್ವರ

Published On :

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶಾಸಕರ ವಿದೇಶ ಪ್ರವಾಸವನ್ನು ತಪ್ಪಾಗಿ ನೋಡಬಾರದು ಎಂದು ಕಾಂಗ್ರೆಸ್ ಹೇಳಿದ್ದರೆ, ನಮ್ಮ ಪಕ್ಷದ ಶಾಸಕರನ್ನು ಪ್ರವಾಸಕ್ಕೆ ಕಳುಹಿಸುವುದಿಲ್ಲ ಎಂದು ಜೆಡಿಎಸ್ ಹೇಳಿದೆ.
ಶಾಸಕರ ವಿದೇಶ ಪ್ರವಾಸವನ್ನು ತಪ್ಪು ಎಂಬ ದೃಷ್ಟಿಯಿಂದಲೇ ನೋಡಬಾರದು. ಅವರು ಅಧ್ಯಯನ ಪ್ರವಾಸ ನಡೆಸಿ ಅಲ್ಲಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಮ್ಮ ಅನುಭವ ವರದಿಯನ್ನು ಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಸಲ್ಲಿಸುತ್ತಾರೆ. ಆದರೆ ಬರ ಸಂದರ್ಭದಲ್ಲಿ ವಿದೇಶ ಪ್ರವಾಸ ಬೇಡ ಎಂಬುದನ್ನು ನಾನು ಒಪ್ಪುತ್ತೇನೆ. ಆದಾಗಿಯೂ ಈ ಬಗ್ಗೆ ಅಂತಿಮ ನಿರ್ಧಾರವನ್ನು ಸಭಾಧ್ಯಕ್ಷರು ತೆಗೆದುಕೊಳ್ಳುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.
ಈ ವರ್ಷ ಶಾಸಕರ ವಿದೇಶ ಪ್ರವಾಸವನ್ನು ನಿಲ್ಲಿಸಲಿ. ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದಾದರೆ ಇಂಥ ದುಂದು ವೆಚ್ಚ ಏಕೆ? ನಾನು ನಮ್ಮ ಪಕ್ಷದ ಎಲ್ಲ ಶಾಸಕರಿಗೆ ಸರ್ಕಾರಿ ವೆಚ್ಚದಲ್ಲಿ ಪ್ರವಾಸಕ್ಕೆ ಹೋಗಬೇಡಿ ಎಂದು ಸಲಹೆ ನೀಡಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಇದೇ ನಿಲುವು ತೆಗೆದುಕೊಳ್ಳಲಿ ಎಂದು ಪ್ರತಿಪಕ್ಷ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.


ತಲೆ ಹರಟೆ

ಬರಗಾಲ ಬಿದ್ದಿದೆ ಎಂದು ಯಾರೂ ಊಟ, ನಿದ್ದೆ ಮಾಡುವುದನ್ನು ಬಿಟ್ಟಿಲ್ಲ. ಪ್ರತಿ ವರ್ಷವೂ ವಿದೇಶ ಪ್ರವಾಸ ಇರುತ್ತದೆ. ಶಾಸಕರು ಅಧ್ಯಯನ ಕೈಗೊಳ್ಳಲು ವಿದೇಶಕ್ಕೆ ಹೋಗುತ್ತಾರೆಯೇ ಹೊರತು ಮೋಜಿಗಾಗಲ್ಲ. ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳು ವಿನಾಕಾರಣ ಈ ಬಗ್ಗೆ ವಿವಾದ ಸೃಷ್ಟಿಸುತ್ತಿವೆ.
- ಎಚ್.ವೈ. ಮೇಟಿ, ಬಾಗಲಕೋಟೆ ಶಾಸಕ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.