ಕಾಲುವೆಗೆ ಬಸ್; 5 ಸಾವು

ಮಂಡ್ಯ: ಖಾಸಗಿ ಬಸ್ಸೊಂದು ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಐದು ಮಂದಿ ಸ್ಥಳದಲ್ಲೇ ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಸಾತನೂರು ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಮಂಡ್ಯ ತಾಲೂಕು ಹುಲಿವಾನ ಗ್ರಾಮದ ಲೋಕೇಶ್ (34), ಕೆ.ಗೌಡಗೆರೆ ಗ್ರಾಮದ ಜಿ.ಪಿ.ಶ್ರೀಕಾಂತ(27), ಬೋರಯ್ಯರ ಪತ್ನಿ ಲಕ್ಷ್ಮಮ್ಮ (35), ನಾಥೇಗೌಡ (56) ಹಾಗೂ ಎಸ್.ಐ.ಕೋಡಿಹಳ್ಳಿಯ ಶಿವಣ್ಣ (62) ಮೃತರು. ಅಪಘಾತದಲ್ಲಿ ದ್ಯಾಪಸಂದ್ರ, ಹೊನಗಾನಹಳ್ಳಿ ಸೇರಿದಂತೆ ಸುತ್ತಮುತ್ತಲ ಹಳ್ಳಿಯ 57ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಣ್ಣ ಪುಟ್ಟ ಗಾಯಾಳುಗಳು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರ ಸ್ವರೂಪದ ಗಾಯಾಳುಗಳನ್ನು ಮೈಸೂರು ಮತ್ತು ಬೆಂಗಳೂರು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಚಾಲಕನಿಗೆ ಯಾವುದೇ ಗಾಯಗಳಾಗದೆ ಪಾರಾಗಿದ್ದಾನೆ. ಚಾಲಕನ ಅಜಾಗರೂಕತೆಯಿಂದ ವೇಗವಾಗಿ ಓಡಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆ ವಿವರ: ಶ್ರೀ ಉದಯರಂಗ ಮೋಟಾರ್ ಸರ್ವಿಸ್ ದ್ಯಾಪಸಂದ್ರಕ್ಕೆ ತೆರಳಿ ಮಂಡ್ಯಕ್ಕೆ ಹಿಂದಿರುಗುತ್ತಿದ್ದ ವೇಳೆ ಸಾತನೂರಿನ ಸಣ್ಣಹಳ್ಳಿ ಸೇತುವೆ ಬಳಿ ಬಲಭಾಗದ ತಡೆಗೋಡೆ ಮುರಿದುಕೊಂಡು 20 ಅಡಿ ಆಳದ ಕಾಲುವೆಗೆ ತಲೆ ಕೆಳಗಾಗಿ ಉರುಳಿ ಬಿದ್ದಿದೆ. ಸ್ಥಳೀಯರು ಧಾವಿಸಿ ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಜಿಲ್ಲಾ ಎಸ್ಪಿ, ಆರ್ಟಿಒ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.
ಎಲ್ಲಿ?
ಮಂಡ್ಯದ ಸಾತನೂರು ಗ್ರಾಮದ ಬಳಿ
ಹೇಗೆ?
ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಬಸ್
ಏನಾಯ್ತು?
5 ಮಂದಿ ಸ್ಥಳದಲ್ಲೇ ಸಾವು, 57 ಮಂದಿಗೆ ಗಾಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


