ಪ್ರಧಾನ ಸುದ್ದಿ

ಫೆ.20.ರೊಳೆಗೆ ಕಾವೇರಿ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಸೂಚನೆ

ಫೆ.20.ರೊಳೆಗೆ ಕಾವೇರಿ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಸೂಚನೆ
Published On :

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪಿನ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ. ಈ ಮೂಲಕ ಕರ್ನಾಟಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.

ಫೆಬ್ರುವರಿ 20ರೊಳಗೆ ಅಂತಿಮ ತೀರ್ಪಿನ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವುದರಿಂದ ತೀರ್ಪುಗೆ ಎಲ್ಲ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಅಲ್ಲದೆ ರಾಜ್ಯ ಸರ್ಕಾರ ಸಹ ತೀರ್ಪು ಹೊರಡಿಸದಂತೆ ಕೇಂದ್ರಕ್ಕೆ ಮನವಿ ಮಾಡಿತ್ತು. ಆದರೆ ಕಳೆದ ಐದು ವರ್ಷಗಳಿಂದ ತೀರ್ಪು ಪ್ರಕಟಿಸಿದೆ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರ ನಿಯಮಾವಳಿಗಳನ್ನು ಉಲ್ಲಂಘಿಸಿದೆ ಎಂದು ಸುಪ್ರೀಂ ಕೋರ್ಟ್ ಇಂದು ಕಿಡಿ ಕಾರಿದೆ.

ಇದೇ ವೇಳೆ ತಮಿಳುನಾಡಿಗೆ ಎರಡು ಟಿಎಂಸಿ ನೀರು ಬಿಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿರುವ ಸುಪ್ರೀಂ ಪೀಠ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿನ ನೀರಿನ ಅಗತ್ಯತೆಗಳ ಬಗ್ಗೆ ಎರಡು ದಿನದಲ್ಲಿ ವರದಿ ನೀಡುವಂತೆ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ಸೂಚಿಸಿದೆ.

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸಾಂಬಾ ಬೆಳೆದ ಮೂರು ಜಿಲ್ಲೆಗಳಲ್ಲಿ ನೀರಿನ ಅವಶ್ಯಕತೆ ಕುರಿತು ಅಧ್ಯಯನ ನಡೆಸಲು ತ್ರಿಸದಸ್ಯ ಸಮಿತಿ ರಚಿಸುವಂತೆ ಆದೇಶಿಸಿದೆ.

ಫೆ.6ರೊಳಗೆ ಸಮಿತಿ ವರದಿ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಈ ತ್ರಿಸದಸ್ಯ ಅಧ್ಯಯನ ಸಮಿತಿ ತಂಜಾವೂರು, ನಾಗಪಟ್ಟಣಂ, ತಿರುವಾಯೂರ್ ಜಿಲ್ಲೆಗಳಲ್ಲಿ ಸಮಿತಿ ಅಧ್ಯಯನ ನಡೆಸಲಿದೆ.

ವರದಿ ಆಧರಿಸಿ ಮೆಟ್ಟೂರು ಜಲಾಶಯಕ್ಕೆ ನೀರು ಬೀಡುವಂತೆ ಕರ್ನಾಟಕಕ್ಕೆ ಸೂಚಿಸಿಲಾಗುವುದು. ಅಲ್ಲಿವರೆಗೆ ಸಾಂಬಾ ಬೆಳೆಗಳಿಗೆ ಮೆಟ್ಟೂರು ಜಲಾಶಯದಿಂದಲೇ ನೀರು ಬಳಸಿಕೊಳ್ಳುವಂತೆ ತಮಿಳುನಾಡಿಗೆ ಕೋರ್ಟ್ ಸೂಚಿಸಿದೆ.

ಕಾವೇರಿ ನ್ಯಾಯಾಧೀಕರಣ ಅಂತಿಮ ತೀರ್ಪಿನ ಪ್ರಕಾರ, ಕರ್ನಾಟಕ 182, ತಮಿಳುನಾಡು 192, ಕೇರಳ-30, ಪಾಂಡಿಚೇರಿ-7 ಟಿಎಂಸಿ ನೀರು ಹಂಚಿಕೆಯಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.