ಪ್ರಧಾನ ಸುದ್ದಿ

ಸೆಮಿಫೈನಲ್‌ಗೆ ಬಿಜೆಪಿ ಸಜ್ಜು

ಸೆಮಿಫೈನಲ್‌ಗೆ ಬಿಜೆಪಿ ಸಜ್ಜು
Published On :

ಬೆಂಗಳೂರು: ಬದಲಾದ ನಾಯಕನ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಎಂಬ 'ಸೆಮಿಫೈನಲ್‌'ಗೆ ಸಿದ್ಧವಾಗುತ್ತಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ತೊರೆದ ಮೇಲೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿರುವುದರಿಂದ ಪಕ್ಷಕ್ಕೆ ಇದು ಸವಾಲು ಮತ್ತು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿ ಇತರೆ ಎಲ್ಲಾ ಪಕ್ಷಗಳಿಗಿಂತ ಮುನ್ನವೇ ಚುನಾವಣೆಗೆ ಸಿದ್ಧವಾಗಿ ಆಖಾಡಕ್ಕೆ ಇಳಿಯುವ ಉದ್ದೇಶದೊಂದಿಗೆ ತಯಾರಿ ನಡೆಸುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷ ತ್ಯಜಿಸಿ ಕೆಜೆಪಿ ಸೇರಿದಂತೆ ಬೇರೆ ಪಕ್ಷಗಳಿಗೆ ಸೇರಲಿದ್ದಾರೆ ಎನ್ನಲಾಗುತ್ತಿರುವ ಸಚಿವರು, ಶಾಸಕರ ಬೆಂಬಲವನ್ನೂ ಪಡೆದು ಮುನ್ನುಗ್ಗಲು ನಿರ್ಧರಿಸಿದೆ. ಇತರೆಲ್ಲಾ ಪಕ್ಷಗಳಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಚುನಾವಣಾ ಪ್ರಣಾಳಿಕೆ ಬಿಡುಗಡೆ, ಕರಪತ್ರಗಳ ಹಂಚಿಕೆ, ಬಹಿರಂಗ ಪ್ರಚಾರ.. ಹೀಗೆ ಎಲ್ಲಾ ಸಿದ್ಧತೆಗಳನ್ನು ಬಿಜೆಪಿ ಪೂರ್ಣಗೊಳಿಸಲು ಸಜ್ಜಾಗಿದೆ.                          
ಈ ನಿಟ್ಟಿನಲ್ಲಿ ಚುನಾವಣಾ ರೂಪುರೇಷೆಗಳ ಕುರಿತಂತೆ ಶನಿವಾರ ಶಾಸಕರು, ಸಂಸದರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರ ಮಹತ್ವದ ಸಮಾಲೋಚನೆ ಸಭೆ ನಡೆಸಲಾಗಿದೆ. ಶನಿವಾರ ಬೆಳಗಿನಿಂದ ಸಂಜೆವರೆಗೂ ನಗರದ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಪಕ್ಷದ ಮುಖಂಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೂರ್ವಸಿದ್ಧತೆಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.
ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಾಥ್ ಮಲ್ಕಾಪುರೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಅಥವಾ ಬುಧವಾರ ಪ್ರಕಟಿಸಲಾಗುವುದು. ಫೆ.28ರಿಂದ ಎಲ್ಲಾ ಕಡೆ ಏಕಕಾಲದಲ್ಲಿ ಪ್ರಚಾರ ಆರಂಭಿಸಲಾಗುವುದು. ಫೆ.21ರಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಈ ಎಲ್ಲಾ ವಿಚಾರಗಳನ್ನು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.