ಪ್ರಧಾನ ಸುದ್ದಿ

ಇಂದು ದೆಹಲಿಗೆ ಸರ್ವಪಕ್ಷ ನಿಯೋಗ

Published On :

ಹುಬ್ಬಳ್ಳಿ: ಕಾವೇರಿ ವಿಷಯವಾಗಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಲು ಸೋಮವಾರ(ಫೆ.18) ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಶೆಟ್ಟರ್, 'ಈ ಹಿಂದೆ ಎರಡು ಬಾರಿ ಪ್ರಧಾನಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರಸ್ತುತ ಎಲ್ಲರ ಒತ್ತಾಸೆ ಮೇರೆಗೆ ಮತ್ತೊಮ್ಮೆ ಪ್ರಧಾನಿ ಭೇಟಿ ಮಾಡಲಿದ್ದೇವೆ. ಪ್ರಧಾನಿ ನಮ್ಮ ಸಮಸ್ಯೆಯನ್ನು ಅರಿತುಕೊಳ್ಳುತ್ತಾರೆ' ಎಂಬ ವಿಶ್ವಾಸವಿದೆ ಎಂದರು.
ನಾರಿಮನ್ ಬದಲಾವಣೆ ಇಲ್ಲ: ನಾರಿಮನ್ ನೇತೃತ್ವದ ವಕೀಲರ ತಂಡವನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಕಳೆದ 20 ವರ್ಷಗಳಿಂದ ಕಾವೇರಿ ವಿಷಯದಲ್ಲಿ ಹೋರಾಡುತ್ತಿರುವ ನಾರಿಮನ್‌ಗೆ ಅಪಾರ ಜ್ಞಾನವಿದೆ. ಈ ವಕೀಲರ ತಂಡವನ್ನು ಬದಲಾಯಿಸಿದಲ್ಲಿ ಕಾವೇರಿ ವಿಷಯವಾಗಿ ಹೋರಾಟಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದು ಶೆಟ್ಟರ್ ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.