

ನವದೆಹಲಿ: ಅಕ್ರಮ ಸಂಪತ್ತು ಗಳಿಕೆ ಆರೋಪ ಎದುರಿಸುತ್ತಿದ್ದ ಮುಲಾಯಂ ಸಿಂಗ್ ಯಾದವ್ ಅವರನ್ನು ರಕ್ಷಿಸಿದ ಆರೋಪಕ್ಕೆ ತುತ್ತಾಗಿದ್ದ ಕರ್ನಾಟಕದ ರಾಜ್ಯಪಾಲ, ಆಗಿನ ಕಾನೂನು ಸಚಿವ ಎಚ್.ಆರ್. ಭಾರದ್ವಾಜ್, ಜಿ.ಇ. ವಾಹನ್ವತಿ, ಪೃಥ್ವಿರಾಜ್ ಚೌಹಾಣ್ ವಿರುದ್ಧದ ಪ್ರಕರಣವನ್ನು ದೆಹಲಿ ಕೋರ್ಟ್ ವಜಾ ಮಾಡಿದೆ.
ವಿಶೇಷ ನ್ಯಾಯಾಧೀಶೆ ಸಂಗೀತಾ ಡಿಂಗ್ರಾ ಅವರು ಈ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಸುಪ್ರೀಂಕೋರ್ಟ್ ಮುಲಾಯಂ ಸಿಂಗ್ ಯಾದವ್, ಅವರ ಪುತ್ರ ಅಖಿಲೇಶ್ ಯಾದವ್ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಮಾಪ್ತಗೊಳಿಸಿದೆ. ಹೀಗಾಗಿ ಮುಲಾಯಂ ರಕ್ಷಣೆ ಮಾಡಿದ ಆರೋಪಕ್ಕೆ ತುತ್ತಾಗಿರುವ ಈ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸುವುದರಲ್ಲಿ ಅರ್ಥವೇ ಇಲ್ಲ ಎಂದು ಕೋರ್ಟ್ ಹೇಳಿದೆ.
ದೆಹಲಿ ಕೋರ್ಟ್‌ನ ಈ ಆದೇಶದೊಂದಿಗೆ ಭಾರದ್ವಾಜ್, ಪೃಥ್ವಿರಾಜ್ ಚೌಹಾಣ್ ಮತ್ತು ವಾಹನ್ವತಿ ಅವರು ನಿಟ್ಟುಸಿರು ಬಿಡುವಂತಾಗಿದೆ.