ಬಿಜೆಪಿಗೆ ರಾಜನಾಥ

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಅಧ್ಯಕ್ಷೀಯ ಚುನಾವಣೆಗೆ ಭಾರಿ ತಿರುವು ದೊರೆತಿದ್ದು, ಹಿರಿಯ ನಾಯಕ ರಾಜನಾಥ್ ಸಿಂಗ್ ...
ಬಿಜೆಪಿಗೆ ರಾಜನಾಥ
Updated on: 

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಅಧ್ಯಕ್ಷೀಯ ಚುನಾವಣೆಗೆ ಭಾರಿ ತಿರುವು ದೊರೆತಿದ್ದು, ಹಿರಿಯ ನಾಯಕ ರಾಜನಾಥ್ ಸಿಂಗ್ ಅವರು ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗತೊಡಗಿವೆ.
ಯಶವಂತ ಸಿನ್ಹಾ ಅವರ ಸ್ಪರ್ಧೆ ಬೆದರಿಕೆ, ಮಂಗಳವಾರ ಗಡ್ಕರಿ ಅವರಿಗೆ ಸೇರಿದ ಕೆಲವೆಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕರು ರಾಜನಾಥ ಸಿಂಗ್ ಕಡೆಗೆ ಒಲವು ತೋರಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ ಗಡ್ಕರಿ ಅವರೇ ಸ್ಪರ್ಧೆಯಿಂದ ಹಿಂದೆ ಸರಿಯಲಿದ್ದಾರೆ ಎಂದು ಮೂಲಗಳು ಹೇಳಿವೆ.
ಮಂಗಳವಾರ ರಾತ್ರಿ ನಡೆದ ಕಡೇ ಕ್ಷಣದ ಸಭೆಯಲ್ಲಿ ಪಾಲ್ಗೊಂಡಿದ್ದ ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಮತ್ತು ವೆಂಕಯ್ಯ ನಾಯ್ಡು ಅವರು ಚರ್ಚೆ ನಡೆಸಿದ್ದರು. ಬಳಿಕ ವರಿಷ್ಠರೆಲ್ಲಾ ಸಭೆ ಸೇರಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.
ರಾಜನಾಥ್ ಸಿಂಗ್ ಅವರ ಹೆಸರಿಗೆ ಆಡ್ವಾಣಿ ಅವರು ಮೊದಲಿಗೆ ವಿರೋಧಿಸಿದರೂ, ಬಳಿಕ ಒಪ್ಪಿಕೊಂಡರು ಎಂದು ಮೂಲಗಳು ಹೇಳಿವೆ.

ಗಡ್ಕರಿ ರಾಜಿನಾಮೆ
ಹಾಲಿ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ರಾಜನಾಥ ಸಿಂಗ್ ಆಯ್ಕೆ ಸುಗಮವಾಗುವ ದೃಷ್ಟಿಯಿಂದ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com