ಮಗನಿಂದ್ಯಾಕೆ ರಾಜಿನಾಮೆ ಕೊಡಿಸ್ತಿಲ್ಲ?

Updated on: 

ಬೆಂಗಳೂರು: ಶಾಸಕರಿಂದ ರಾಜಿನಾಮೆ ಕೊಡಿಸಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಮಗನಿಂದ ಸಂಸದ ಸ್ಥಾನಕ್ಕೆ ಏಕೆ ರಾಜಿನಾಮೆ ಕೊಡಿಸುತ್ತಿಲ್ಲ?
ಇದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಕೆಜೆಪಿ ಅಧ್ಯಕ್ಷರೂ ಆಗಿರುವ ಯಡಿಯೂರಪ್ಪ ಅವರ ಮುಂದಿಟ್ಟಿರುವ ಪ್ರಶ್ನೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಯಡಿಯೂರಪ್ಪ ಅವರ ವಿರುದ್ಧ ಕಿಡಿ ಕಾರಿದರು. ಯಡಿಯೂರಪ್ಪ ಅವರು ಕಾಂಗ್ರೆಸ್ ಭಯದಿಂದ ಈ ರೀತಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಯಡಿಯೂರಪ್ಪ ಅವರನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ಸರ್ಕಾರ ಉರುಳಿಸುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ 13 ಶಾಸಕರು ಬಲಿಪಶುಗಳಾಗುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕರಿಂದ ರಾಜಿನಾಮೆ ಕೊಡಿಸಿ ಕಂಡವರ ಮಕ್ಕಳ ಬಾವಿಗೆ ತಳ್ಳುವ ಬಿಎಸ್‌ವೈ: ಈಶ್ವರಪ್ಪ
ಯಡಿಯೂರಪ್ಪರ ಕೈಗೊಂಬೆ ಮಾಡಿಕೊಂಡು ಕಾಂಗ್ರೆಸ್‌ನಿಂದ ಸರ್ಕಾರ ಕೆಡಹುವ ಯತ್ನ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com