ಪ್ರಧಾನ ಸುದ್ದಿ

ಪ್ರವಾಹಕ್ಕೆ ಸಿಕ್ಕಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ: ಸಿಎಂ

Published On :

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಕಾರವಾರದಲ್ಲಿ ಪ್ರವಾಹಕ್ಕೆ ಸಿಕ್ಕಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಜನತಾದರ್ಶನ ನಡೆಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮೃತರ ಕುಟುಂಬದವರ ಜೊತೆಗೆ ಸಂತ್ರಸ್ತರಾದವರಿಗೂ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದರು. ಪ್ರವಾಹ ಪ್ರೀಡಿತ ಪ್ರದೇಶಗಳಲ್ಲಿ ಈಗಾಗಲೇ ಪರಿಹಾರ ಕಾರ್ಯ ಚುರುಕಿನಿಂದ ನಡೆಯುತ್ತಿದ್ದು, ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಅಲ್ಲೇ ಬೀಡು ಬಿಟ್ಟಿದ್ದಾರೆ. ಸಾರ್ವಜನಿಕರ ಆಸ್ತಿಪಾಸ್ತಿ ಮತ್ತು ಪ್ರಾಣಹಾನಿಯಾಗದಂತೆ ಅಗತ್ಯ ಜಾಗ್ರತೆ ವಹಿಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಇಂದು ಕಬಿನಿಗೆ ಸಿಎಂ ಬಾಗಿನ
ಎಚ್.ಡಿ. ಕೋಟೆ:
ತಾಲೂಕಿನ ಬೀಚನಹಳ್ಳಿ ಸಮೀಪವಿರುವ ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಜು. 6ರ ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸುವರು. ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್, ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ಸಂಸದ ಆರ್. ಧ್ರುವನಾರಾಯಣ, ಶಾಸಕ ಎಸ್. ಚಿಕ್ಕಮಾದು ಭಾಗವಹಿಸುವರು.

ಮುಖ್ಯ ಸಚೇತಕರಾಗಿ ಶಾಸಕ ಅಶೋಕ್ ಪಟ್ಟಣ
ಬೆಂಗಳೂರು: 
ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರಾಗಿ ಶಾಸಕ ಅಶೋಕ್ ಪಟ್ಟಣ ಅವರು ನೇಮಕಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಎರಡನೇ ಬಾರಿ ಅಶೋಕ್ ಅವರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಅಶೋಕ್, ಕೆಪಿಸಿಪಿ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.