ಪ್ರಧಾನ ಸುದ್ದಿ

ಪ್ರೊ.ಶಿವರಾಜ್, ಡಾ.ಮಂಜುನಾಥ್ ವಿರುದ್ಧ ತನಿಖೆ

Published On :

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಬಿ.ಎನ್. ಬಹದ್ದೂರ್ ಆಡಳಿತ ನಿರ್ವಹಣ ಸಂಸ್ಥೆ ಪ್ರಾಧ್ಯಾಪಕ ಬಿ. ಶಿವರಾಜ್ ಮತ್ತು ಡಾ.ಮಂಜುನಾಥ್ ಅವರ ಅಧಿಕಾರ ದುರುಪಯೋಗಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ತನಿಖೆ ನಡೆಸುತ್ತಿದ್ದಾರೆ. ಪ್ರೊ.ಬಿ.ಶಿವರಾಜ್ ಮತ್ತು ಡಾ.ಎಸ್.ಜೆ.ಮಂಜುನಾಥ್ ಅವರು ಬೇರೆ ಬೇರೆ ವಿವಿಗಳಲ್ಲಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಭಾಗವಹಿಸುವಾಗ ಮಾತೃಸಂಸ್ಥೆಯಲ್ಲೂ ಕರ್ತವ್ಯಕ್ಕೆ ಹಾಜರಾಗದಿದ್ದರೂ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿ ದ್ವಿಪಾತ್ರ ಕರ್ತವ್ಯ ನಿರ್ವಹಿಸಿದ್ದರು. ಈ ಸಂಬಂಧ ಗೋಕುಲಂ, ಕಾಂಟೂರ್ ರಸ್ತೆ ನಿವಾಸಿ ಆರ್.ಎನ್. ಸತ್ಯನಾರಾಯಣ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. ಪ್ರೊ.ಶಿವರಾಜ್ ಮತ್ತು ಡಾ.ಮಂಜುನಾಥ್ ಅವರಿಗೆ ಆಗಸ್ಟ್ 5ರ ಗಡುವು ನೀಡಿರುವ ಲೋಕಾಯುಕ್ತರು ವ್ಯಾಖ್ಯಾನ ನೀಡುವಂತೆ ಸೂಚಿಸಿ ತನಿಖೆಗೆ ಚಾಲನೆ ನೀಡಿದ್ದಾರೆ.
ಅಲ್ಲದೆ, ಪ್ರೊ.ಬಿ.ಶಿವರಾಜ್ ಅವರು ಇರಾನ್ ದೇಶದ ಸಿಸ್ತಾನ್ ಮತ್ತು ಬಲೂಚಿಸ್ತಾನ್ ವಿವಿಯೊಂದಿಗೆ ವಿವಿ ಅಥವಾ ಸರ್ಕಾರದ ಪೂರ್ವಾನುಮತಿ ಪಡೆಯದೆ ಒಡಂಬಡಿಕೆ ಮಾಡಿಕೊಂಡ ಬಗ್ಗೆ ರಾಜ್ಯಪಾಲರು ಮತ್ತು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ದೂರು ನೀಡಲಾಗಿದೆ. ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಈ ಬಗ್ಗೆ ವರದಿ ಸಲ್ಲಿಸುವಂತೆ ಮೈಸೂರು ವಿವಿ ಕುಲಸಚಿವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು 'ಕನ್ನಡಪ್ರಭ'ದಲ್ಲಿ ಮಾ.13ರಂದು 'ಪ್ರೊಫೆಸರ್ ತ್ರಿಪಾತ್ರ' ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.