ಕಾಂಗ್ರೆಸ್‌ನ ಆಂತರಿಕ ಸಾಮರಸ್ಯ ಕೆಡುತ್ತಿದೆ: ಬಿಎಸ್‌ವೈ
ಬೆಂಗಳೂರು: ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌ನಲ್ಲಿ ಸಾಮರಸ್ಯ ಕೆಡುತ್ತಿದೆ. ಸಮನ್ವಯ ಸಮಿತಿ ರಚಿಸುವ ಪ್ರಸ್ತಾವನೆಯೇ ಇದಕ್ಕೆ ಉದಾಹರಣೆ. ಮುಖ್ಯಮಂತ್ರಿಯನ್ನು ನಂಬದ ಸ್ಥಿತಿ ಆ ಪಕ್ಷದಲ್ಲಿದ್ದು, ಅವರನ್ನು ಹತೋಟಿಯಲ್ಲಿಟ್ಟುಕೊಳ್ಳಲು ಮುಖಂಡರು ಪ್ರಯತ್ನಿಸುತ್ತಿರುವುದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವ್ಯಕ್ತಪಡಿಸಿದ ಅಭಿಪ್ರಾಯವಿದು. ಕೆಜೆಪಿ ರಾಜ್ಯ ಮತ್ತು ಜಿಲ್ಲಾ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ವಿಧಾನಸಭೆ ಅಧಿವೇಶನ ನಂತರ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಹೋರಾಟ ರೂಪಿಸಲಾಗುವುದು ಎಂದು ಹೇಳಿದ ಅವರು, ಬಿಪಿಎಲ್ ಕಾರ್ಡ್‌ದಾರರಿಗೆ ಅಗ್ಗದ ದರದಲ್ಲಿ ಅಕ್ಕಿ ವಿತರಿಸುವ ಆತುರದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ ಮಾತ್ರ ಸೀಮಿತವಾದಂತೆ ಕಂಡುಬರುತ್ತಿದೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಮಿತಿಗಳು ಇನ್ನೂ ರಚನೆಯಾಗಿಲ್ಲ. ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಅತಿವೃಷ್ಟಿ, ಅನಾವೃಷ್ಟಿಯಿಂದ ತತ್ತರಿಸಿರುವ ಜನರಿಗೆ ಪರಿಹಾರ ಕಾರ್ಯಕ್ರಮ ರೂಪಿಸದ ಕಾರಣ ಸರ್ಕಾರ ಬದುಕಿದೆಯೋ? ಸತ್ತಿದೆಯೋ ಎಂದು ಗೊತ್ತಾಗುತ್ತಿಲ್ಲ ಎಂದರು.
ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಜನಪ್ರಿಯ ಕಾರ್ಯಕ್ರಮಗಳನ್ನು ಮೂಲೆಗುಂಪು ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನನ್ನ ಒತ್ತಾಯದಂತೆ ರೈತರ 25 ಸಾವಿರದವರೆಗಿನ ಬೆಳೆ ಸಾಲ ಮನ್ನಾ ಮಾಡಲಾಗಿತ್ತು. ಆದರೆ, ಈ ಮೊತ್ತವನ್ನು ಸರ್ಕಾರ ಸಹಕಾರ ಸಂಘಗಳಿಗೆ ಭರಿಸದ ಕಾರಣ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು 4ಕ್ಕೆ ಹೆಚ್ಚಿಸಿದರೂ ಕಳೆದ ಜನವರಿಯಿಂದ ರೈತರಿಗೆ ಪ್ರೋತ್ಸಾಹಧನವನ್ನೇ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ಅದೇ ರೀತಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವಿರುದ್ಧವೂ ಹರಿಹಾಯ್ದ ಯಡಿಯೂರಪ್ಪ ಅವರುಸೀ ಸರ್ಕಾರದ ಜನವಿರೋಧಿ ಆಡಳಿತದಿಂದ ದೇಶಾದ್ಯಂತ ಕಾಂಗ್ರೆಸ್ ವಿರೋಧಿ ಅಲೆ ಬೀಸುತ್ತಿದೆ. ರಾಜ್ಯದಲ್ಲೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ಲಾಭ ಪಡೆದುಕೊಂಡು ರಾಜ್ಯದಲ್ಲಿ ಕೆಜೆಪಿಯನ್ನು ಸಂಘಟಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

