ರಾಜ್ಯದ ಅಲ್ಲಲ್ಲಿ ಚುರುಕಾಯಿತು ಮಳೆ
ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಂುತ್ತಿರುವುದರಿಂದ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ರಾಜಾಪುರ ಬ್ಯಾರೇಜಿನಿಂದ 62 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕೊಂಕಣ ಪ್ರದೇಶದಲ್ಲಿ ಸುರಿಂುತ್ತಿರುವ ಮಳೆಯಿಂದ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಸಾಮಾನ್ಯಕ್ಕಿಂತ 1 ಅಡಿ ನೀರು ಏರಿಕೆಯಾಗಿದ್ದರಿಂದ ಚಿಕ್ಕೋಡಿ ತಾಲೂಕಿನ ಆರು ಗ್ರಾಮಗಳ ಸೇತುವೆಗಳು ಮುಳುಗಿ ಸಂಪರ್ಕ ಕಡಿತಗೊಂಡಿವೆ ಎಂದು ಚಿಕ್ಕೋಡಿ ತಹಸೀಲ್ದಾರ್ ರಾಜಶೇಖರ ಡಂಬಳ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.
ಸಂಪರ್ಕ ಕಡೆದುಕೊಂಡ ಗ್ರಾಮಗಳು: ಸದಲಗಾ-ಬೋರಗಾಂವ, ಜತ್ರಾಟ-ಭೀವಶಿ, ಕಲ್ಲೋಳ-ಂುಡೂರ, ಅಕ್ಕೋಳ-ಸಿದ್ನಾಳ, ಕಾರದಗಾ-ಭೋಜ ಮತ್ತು ಭೋಜವಾಡಿ-ಹುನ್ನರಗಿ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿವೆ. ಈ ಗ್ರಾಮಗಳ ಜನತೆಗೆ ಪಂರ್ಾಂು ರಸ್ತೆಗಳ ಅನುಕೂಲ ಇರುವುದರಿಂದ ಸಂಚಾರಕ್ಕೆ ಂಾವುದೇ ತೊಂದರೆಯಾಗಿಲ್ಲ. ಹಿಪ್ಪರಗಿ ಬ್ಯಾರೇಜ್ನಿಂದ 12 ಗೇಟ್ಗಳನ್ನೂ ತೆರೆಯಲಾಗಿದೆ. ಆಲಮಟ್ಟಿ ಜಲಾಶಂುದಿಂದ 53 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡುತ್ತಿರುವುದರಿಂದ ಂಾವುದೇ ತರಹದ ಪ್ರವಾಹ ಪರಿಸ್ಥಿತಿ ಇಲ್ಲ.
ಮಲೆನಾಡಲ್ಲೂ ಮಳೆ: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಆಗುಂಬೆಯಲ್ಲಿ ಅತ್ಯಧಿಕ 109 ಮಿ.ಮೀ.ಮಳೆಯಾಗಿದೆ. ಹೊಸನಗರ ವ್ಯಾಪ್ತಿಯ ಮಾಣಿ ಡ್ಯಾಂ ವ್ಯಾಪ್ತಿಯಲ್ಲಿ 95 ಮಿ.ಮೀ, ಹುಲಿಕಲ್ನಲ್ಲಿ 81 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 70 ಮಿ.ಮೀ ಮಳೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿಂದ ಜಿಲ್ಲೆಯ ಪ್ರಮುಖ ನದಿಗಳಾದ ತುಂಗಾ, ಭದ್ರಾ, ಶರಾವತಿ, ಮಾಲತಿ, ವರದಾ, ಕುಮದ್ವತಿ ನದಿಗಳ ಹರಿವು ಕೊಂಚ ಏರಿದೆ. ಹಾಸನದ ಹೇಮಾವತಿ ಜಲಾಶಯಕ್ಕೆ 11 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಈಗ 3,200 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರಿಸಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

