ಬಿಐಎಎಲ್ಗೆ ಇನ್ನು ಕೆಂಪೇಗೌಡ ಹೆಸರು
ಕನ್ನಡಪ್ರಭ ಪ್ರತಿನಿಧಿಯಿಂದ
ನವದೆಹಲಿ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(ಬಿಐಎಎಲ್) ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರೊಂದಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಬೇಕೆಂಬ ಜನರ ಬೇಡಿಕೆಗೆ ಕೇಂದ್ರದ ಮನ್ನಣೆ ಸಿಕ್ಕಿದಂತಾಗಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮರು ನಾಮಕರಣ ಘೋಷಣೆಯನ್ನು ಗೆಜೆಟ್ನಲ್ಲಿ ಪ್ರಕಟಿಸುವ ಔಪಚಾರಿಕ ಪ್ರಕ್ರಿಯೆ ಪೂರ್ಣಗೊಂಡ ನಂತರ ಸಮಾರಂಭಮೊಂದರಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಅದಾದ ನಂತರ ಎಲ್ಲಾ ಆಡಳಿತಾತ್ಮಕ ದಾಖಲೆಗಳಲ್ಲೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದೇ ಕರೆಯಲಾಗುತ್ತದೆ. ಬುಧವಾರ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಮರು ನಾಮಕರಣ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಗಿದೆ. ಸಂಪುಟದ ಸಭೆಯಲ್ಲಿ ರಾಜ್ಯ ಪ್ರತಿನಿಧಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ ಹಾಗೂ ಆಸ್ಕರ್ ಫರ್ನಾಂಡಿಸ್ ಇದ್ದರು.
ಬೇಡಿಕೆ ಇತ್ತು: ದೇವನಹಳ್ಳಿ ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರೂಪುಗೊಂಡ ವೇಳೆಯಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಬೇಕೆಂಬ ಬೇಡಿಕೆ ಎದ್ದಿತ್ತು. 2008ರ ಮೇ ತಿಂಗಳಲ್ಲಿ ವಿಮಾನ ನಿಲ್ದಾಣದಲ್ಲಿ ಅಧಿಕೃತವಾಗಿ ಆರಂಭವಾದಾಗಲೇ ಕೆಂಪೇಗೌಡರ ವಿಮಾನ ನಿಲ್ದಾಣ ಎಂದು ಹೆಸರಿಡಲು ವಿವಿಧ ಸಂಘ ಸಂಸ್ಧೆಗಳು ಆಗ್ರಹಿಸಿದ್ದವು. ಸತತ ಬೇಡಿಕೆಗಳ ಹಿನ್ನೆಲೆಯಲ್ಲಿ ಇದೀಗ ಕನಸು ನನಸಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

