ಪ್ರಧಾನ ಸುದ್ದಿ

'ವೀರ ಬಸವಣ್ಣ' ಚಲನಚಿತ್ರ ನಿರ್ಮಾಣಕ್ಕೆ ತೀವ್ರ ವಿರೋಧ

Published On :

ವಿಧಾನಸಭೆ: ದಯೆಯೇ ಧರ್ಮದ ಮೂಲವಯ್ಯ ಎಂದು ಸಾರಿದ ಬಸವಣ್ಣನ ಹೆಸರಿನಲ್ಲಿ ವೀರ ಬಸವಣ್ಣ ಎಂಬ ಚಿತ್ರ ಮಾಡಲು ಹೊರಟಿರುವ ವಿಚಾರ ವಿಧಾನಸಭೆಯಲ್ಲಿ ಬುಧವಾರ ಪ್ರತಿಧ್ವನಿಸಿತು. ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಬಿಜೆಪಿಯ ಗೋವಿಂದ ಕಾರಜೋಳ ಅವರು, ವೀರ ಬಸವಣ್ಣ ಎಂಬ ಹೆಸರಿನಲ್ಲಿ ಬಸವಣ್ಣನ ಕೈಗೆ ಖಡ್ಗ ಕೊಟ್ಟು ಚಿತ್ರ ಮಾಡಲು ಹೊರಟಿದ್ದಾರೆ. ಇವರಿಗೆ ಬಸವಣ್ಣ ಎಂಥವರಿದ್ದರು ಎಂಬ ಕಲ್ಪನೆಯೇ ಇಲ್ಲ. ವಿಶ್ವಕ್ಕೆ, ಸಕಲ ಜೀವಾತ್ಮಕ್ಕೆ ಲೇಸು ಬಯಸುವ ಸಂದೇಶ ಸಾರಿದ ಬಸವಣ್ಣನ ಹೆಸರಿನಲ್ಲಿ ಕೈಯ್ಯಲ್ಲಿ ಖಡ್ಗ ಹಿಡಿದು ಚಿತ್ರ ಮಾಡಲು ಹೊರಟಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಮಧ್ಯೆ ಪ್ರವೇಶಿಸಿ, ಇದು ಶೂನ್ಯ ವೇಳೆ. ಹೀಗಾಗಿ ಹೆಚ್ಚು ಸುದೀರ್ಘವಾಗಿ ಮಾತನಾಡಲು ಅವಕಾಶವಿಲ್ಲ ಎಂದು ಕಾರಜೋಳ ಅವರ ಮಾತಿಗೆ ಕತ್ತರಿ ಹಾಕಲು ಮುಂದಾದರು.ಇದರಿಂದ ಅಸಮಾಧಾನಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಇದೊಂದು ಪ್ರಮುಖ ವಿಚಾರ. ಜಗಜ್ಯೋತಿ ಬಸವೇಶ್ವರರಿಗೆ ಅಪಚಾರವಾಗುವ ರೀತಿ ಯಾರಾದರೂ ನಡೆದುಕೊಂಡರೆ ಇಡೀ ರಾಜ್ಯಕ್ಕೆ ಬೆಂಕಿ ಹತ್ತಿಕೊಳ್ಳುತ್ತದೆ. ಹೀಗಿರುವಾಗ ಪ್ರಮುಖ ವಿಚಾರವೊಂದರ ಬಗ್ಗೆ ಹೆಚ್ಚು ಮಾತು ಬೇಡ ಎಂದು ಹೇಳಿ ಜನ ಬೀದಿಗಿಳಿದು ಹೋರಾಟ ಮಾಡಲು ಅವಕಾಶ ಮಾಡಿಕೊಡಬೇಕೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.