ಪ್ರಧಾನ ಸುದ್ದಿ

ಚಿತ್ರಕಲಾವಿದ ರಾಯ್ಕರ್ ಮಾಸ್ತರ್ ನಿಧನ

Published On :

ಶಿರಸಿ: ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದ, ಶಿರಸಿಯ ರಾಯ್ಕರ್ ಮಾಸ್ತರ್ (89) ಬುಧವಾರ ಸಂಜೆ ನಿಧನರಾದರು. ರಾಯ್ಕರ್ ಮಾಸ್ತರ್ ಎಂದೇ ಖ್ಯಾತರಾಗಿದ್ದ ರಾಮಚಂದ್ರ ಗುರುರಾವ್ ರಾಯ್ಕರ್ ಕೆಲವು ಕಾಲದಿಂದ ಅನಾರೋಗ್ಯ ಪೀಡಿತರಾಗಿದ್ದರು. ಅವರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳು, ಅಭಿಮಾನಿಗಳಿದ್ದಾರೆ. ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದ ಅವರು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ನಿಕಟವರ್ತಿಯಾಗಿದ್ದರು. ಈ ಭಾಗದ ಸಾವಿರಾರು ಚಿತ್ರಕಲಾ ಪ್ರತಿಭೆಗಳನ್ನು ಬೆಳೆಸಿದ ಇವರು ಲಲಿತಕಲಾ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಅಕಾಡೆಮಿಯ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು. ಕಲಾವಿದರಾಗಿ ಹೆಸರು ಮಾಡಿದ್ದ ಅವರು ಉತ್ತರ ಕನ್ನಡದ ಜಿಲ್ಲಾ ಪತ್ರಿಕೆಗಳ ಸಂಗ್ರಾಹಕರೂ ಆಗಿದ್ದರು. ಜಿಲ್ಲೆಯ ಪ್ರಪ್ರಥಮ ಪತ್ರಿಕೆ 'ಹವ್ಯಕ ಸುಬೋಧ'ದ ಪ್ರತಿ ಸೇರಿದಂತೆ ಸಾವಿರಾರು ಪತ್ರಿಕೆಗಳ ಸಂಗ್ರಹ ಅವರಲ್ಲಿದೆ. ಅವುಗಳನ್ನು ಹೊನ್ನಾವರದ ಕರ್ಕಿಯ ದೈವಜ್ಞ ಮಠಕ್ಕೆ ನೀಡಿದ್ದಾರೆ. ಪ್ರಸ್ತುತ ಅವರು ಶಿರಸಿಯ ಸುವರ್ಣ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಯ್ಕರ್ ಮಾಸ್ತರ್‌ಗೆ 1989ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ವಿವಿಧ ಸಂಘ-ಸಂಸ್ಥೆಗಳಿಂದ ಗೌರವ, ಸನ್ಮಾನಗಳು ಪ್ರಾಪ್ತವಾಗಿದ್ದವು. ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಗಿರೀಶ್ ಕಾರ್ನಾಡರು ರಾಯ್ಕರ್ ಮಾಸ್ತರರ ಶಿಷ್ಯರಾಗಿದ್ದರು. ರಾಯ್ಕರ್ ಅವರ ಅಂತ್ಯ ಸಂಸ್ಕಾರ ಇಲ್ಲಿನ ವಿದ್ಯಾನಗರ ರುದ್ರಭೂಮಿಯಲ್ಲಿ ಗುರುವಾರ ಮಧ್ಯಾಹ್ನ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.