'ವೀರ ಬಸವಣ್ಣ' ಚಿತ್ರ ಖಂಡಿಸಿ ಬಾಗೇವಾಡಿ ಬಂದ್
ಕ.ಪ್ರ.ವಾರ್ತೆ ಬಸವನಬಾಗೇವಾಡಿ ಜು.19
'ವೀರ ಬಸವಣ್ಣ' ಚಲನಚಿತ್ರವನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಶುಕ್ರವಾರ ಅಖಿಲ ಭಾರತ ವೀರಶೈವ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಬಸವಸೈನ್ಯ, ರೈತ ಸಂಘ, ವಿವಿಧ ದಲಿತ ಸಂಘಟನೆಗಳು, ವಿಶ್ವಬಂಧು ಬಸವ ಸಮಿತಿ, ಕರವೇ ಸೇರಿದಂತೆ ಹಲವು ಸಂಘ, ಸಂಸ್ಥೆಗಳು ವಿವಿಧ ಕರೆ ನೀಡಿದ್ದ ಬಸವನಬಾಗೇವಾಡಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ.
ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗ ಬೆಳಗ್ಗೆ ವಿವಿಧ ಸಂಘಟನೆಗಳ ಮುಖಂಡರು ಜಮಾಯಿಸಿ ಪ್ರಮುಖ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಬಸವೇಶ್ವರ ವೃತ್ತದಲ್ಲಿ ಟಯರ್ಗೆ ಬೆಂಕಿ ಹೆಚ್ಚು ಆಕ್ರೋಶ ವ್ಯಕ್ತಪಡಿಸಿದರು.
ಬಸವಣ್ಣನವರ ವ್ಯಕ್ತಿತ್ವಕ್ಕೆ ಕಳಂಕ ತರುವ ರೀತಿಯಲ್ಲಿ ನಿರ್ಮಾಪಕ ಶ್ರೀನಿವಾಸರಾಜು ಚಿತ್ರ ನಿರ್ಮಿಸಲು ಮುಂದಾಗಿರುವುದು ಇಡೀ ನಾಡಿನ ಬಸವ ಭಕ್ತರಿಗೆ ಮಾಡಿರುವ ಅಪಮಾನವಾಗಿದೆ. ಇಂಥ ಚಿತ್ರವನ್ನು ಸರ್ಕಾರ ನಿಷೇಧಿಸಬೇಕು, ನಿರ್ಮಾಪಕ ಶ್ರೀನಿವಾಸರಾಜು, ನಟ ಉಪೇಂದ್ರ ಅವರನ್ನು ಚಲನಚಿತ್ರ ವಾಣಿಜ್ಯ ಮಂಡಳಿ ನಿಷೇಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಇಲ್ಲಿನ ವಿರಕ್ತಮಠದ ಸಿದ್ದಲಿಂಗದೇವರು, ಮನಗೂಳಿ ಹಿರೇಮಠದ ಸಂಗನಬಸವ ದೇವರು ಮಾತನಾಡಿ, ವಿಶ್ವಗುರು ಬಸವಣ್ಣನವರ ಹೆಸರಿಟ್ಟಿರುವ ಚಲನಚಿತ್ರ ಯಾವುದೇ ಕಾರಣಕ್ಕೂ ಚಿತ್ರೀಕರಣ ಮಾಡಬಾರದು. ಈ ಚಲನಚಿತ್ರಕ್ಕೆ 'ಬ್ರಾಹ್ಮಣ' ಎಂಬ ಹೆಸರನ್ನು ಇಟ್ಟು ಮತ್ತೆ ಹೊಸ ವಿವಾದ ಸೃಷ್ಟಿಸಲು ಹೊರಟಿರುವುದು ವಿಷಾದಕರ ಸಂಗತಿ ಎಂದು ಹೇಳಿದರು.
ನ್ಯಾಯಾಲಯ ಕಲಾಪ ಬಹಿಷ್ಕಾರ: ಪ್ರತಿಭಟನೆಯನ್ನು ಬೆಂಬಲಿಸಿ ಇಲ್ಲಿನ ಬಾರ್ ಅಸೋಸಿಷಿಯನ್ ಸದಸ್ಯರು ನ್ಯಾಯಾಲಯ ಕಲಾಪ ಬಹಿಷ್ಕರಿಸಿರು. ನ್ಯಾಯಾಲಯದಿಂದ ಬೈಕ್ ರ್ಯಾಲಿ ಮೂಲಕ ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

