ಪ್ರಧಾನ ಸುದ್ದಿ

ಅಕ್ಕಿಗೆ ಮತ್ತೆ ಮನವಿ ಇಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಕಿಗೆ ಮತ್ತೆ ಮನವಿ ಇಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
Published On :

ಕನ್ನಡಪ್ರಭ ಪ್ರತಿನಿಧಿಯಿಂದ
ನವದೆಹಲಿ:
ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಒದಗಿಸುವಂತೆ ಕೇಂದ್ರ ಆಹಾರ ಸಚಿವ ಕೆ.ವಿ. ಥಾಮಸ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮನವಿ ಮಾಡಿದರು. ಬುಧವಾರ ಆಹಾರ ಸಚಿವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, 'ಕರ್ನಾಟಕದಲ್ಲಿ ಬಡವರಿಗೆ ಒಂದು ಕೆಜಿ ಅಕ್ಕಿಗೆ ಒಂದು ರುಪಾಯಿ ದರದಲ್ಲಿ ನೀಡಲು ರೂಪಿಸಿರುವ ಯೋಜನೆ ಜಾರಿ ಮಾಡಲು ಹೆಚ್ಚುವರಿ ಅಕ್ಕಿ ಅಗತ್ಯವಿದೆ' ಎಂದು ಕೋರಿದರು.
ಅಕ್ಕಿಗಾಗಿ ಥಾಮಸ್ ಅವರನ್ನು ಭೇಟಿ ಮಾಡುತ್ತಿರುವುದು ಇದು ಎರಡನೇ ಬಾರಿ. ಮೇ 16 ರಂದು ಸಿದ್ದರಾಮಯ್ಯ ಥಾಮಸ್ ಅವರನ್ನು ಭೇಟಿ ಮಾಡಿ ಅಕ್ಕಿಗಾಗಿ ಮನವಿ ಸಲ್ಲಿಸಿದ್ದರು. ಆಗ ತಾತ್ವಿಕ ಒಪ್ಪಿಗೆ ನೀಡಿದ್ದ ಥಾಮಸ್ ನಂತರ ಅಕ್ಕಿ ಒದಗಿಸುವ ನಿಟ್ಟಿನಲ್ಲಿ ತಾಂತ್ರಿಕ ಕಾರಣ ನೀಡಿ ಜಾರಿಕೊಂಡಿದ್ದರು. ಹೀಗಾಗಿ ಜೂನ್ 1ರಿಂದ ಜಾರಿ ಆಗಬೇಕಿದ್ದ ಯೋಜನೆ ಜುಲೈ 1ಕ್ಕೆ ಮುಂದೂಡಲ್ಪಟ್ಟಿದೆ. ಈಗಾಗಲೇ ಯೋಜನೆ ಘೋಷಣೆ ಮಾಡಿರುವುದರಿಂದ ಅಕ್ಕಿ ಒದಗಿಸಲೇಬೇಕು ಎಂದು ಆಗ್ರಹಪೂರ್ವಕ ಮನವಿ ಮಾಡಿದರು. ಕರ್ನಾಟಕದ ಅಕ್ಕಿ ಬೇಡಿಕೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿದ ಅನುಮತಿ ಪಡೆದ ನಂತರ ಕ್ರಮ ಕೈಗೊಳ್ಳುವುದಾಗಿ ಥಾಮಸ್ ಭರವಸೆ ನೀಡಿದರು.
ಗೋಡೆ ಒಡೆದದ್ದು ತಪ್ಪು:
ವಿಧಾನಸೌಧದಲ್ಲಿ ಸಚಿವ ರಾಮಾನಾಥ್ ರೈ ಅವರ ಕಚೇರಿಯ ಗೋಡೆ ಒಡೆದದ್ದು ತಪ್ಪು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧ ಪಾರಂಪರಿಕ ಕಟ್ಟಡ. ಆ ಕಟ್ಟಡವನ್ನು ಒಡೆಯುವುದು ವಿರೂಪಗೊಳಿಸುವುದು ಸರಿಯಲ್ಲ. ಈ ಬಗ್ಗೆ ನಾನು ಸಚಿವ ರಮಾನಾಥ್ ರೈ ಅವರೊಂದಿಗೆ ಮಾತನಾಡುತ್ತೇನೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.