ಪ್ರಧಾನ ಸುದ್ದಿ

ಎನ್‌ಸಿಟಿಸಿ ಇಲ್ಲ?

Published On :

ನವದೆಹಲಿ: ಕಾಂಗ್ರೆಸ್ಸೇತರ ರಾಜ್ಯಗಳ ಮುಖ್ಯಮಂತ್ರಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಸ್ತಾವಿತ ರಾಷ್ಟ್ರೀಯ ಉಗ್ರ ನಿಗ್ರಹ ಕೇಂದ್ರ(ಎನ್‌ಸಿಟಿಸಿ)ದ ವಿಚಾರದಲ್ಲಿ ಮುಂದುವರಿಯದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
 ಬುಧವಾರ ನಡೆದ ಮುಖ್ಯಮಂತ್ರಿಗಳ ಸಭೆಯ ಬಳಿಕ ಮಾತನಾಡಿದ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ, ಎಲ್ಲ ರಾಜ್ಯಗಳ ಸಮ್ಮತಿ ಸಿಕ್ಕಿದ ಬಳಿಕವೇ ವಿವಾದಿತ ಎನ್‌ಸಿಟಿಸಿ ಸ್ಥಾಪನೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು. ಸದ್ಯದಲ್ಲಿ ಈ ಪ್ರಸ್ತಾಪಕ್ಕೆ ಎಲ್ಲರ ಒಪ್ಪಿಗೆ ಸಿಗುವುದು ಅಸಾಧ್ಯ. ಹಾಗಾಗಿ ಎನ್‌ಸಿಟಿಸಿ ಸ್ಥಾಪನೆ ಪ್ರಸ್ತಾಪವು ಮೂಲೆಗುಂಪಾಗುವುದು ಖಚಿತ ಎನ್ನುವುದು ಮೂಲಗಳ ಅಭಿಪ್ರಾಯ.
 ಅಷ್ಟೇ ಅಲ್ಲದೆ, ಉಗ್ರನಿಗ್ರಹ ಕೇಂದ್ರದ ವಿಚಾರದಲ್ಲಿ ಉನ್ನತ ಮಟ್ಟದ ರಾಜಕೀಯ ನಾಯಕರ ನಡುವೆ ಚರ್ಚೆ ನಡೆಯುತ್ತಿದೆ. 2014ರ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಎನ್‌ಸಿಟಿಸಿ ಬಗ್ಗೆ ಅಸಮಾಧಾನ ಹೊಂದಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ನಿತೀಶ್ ಕುಮಾರ್ ಅವರನ್ನು ಎದುರು ಹಾಕಿಕೊಳ್ಳುವುದೂ ಕಾಂಗ್ರೆಸ್‌ಗೆ ಮನಸ್ಸಿಲ್ಲ. ಅದಕ್ಕಾಗಿ ಎನ್‌ಸಿಟಿಸಿ ನಿರ್ಧಾರವನ್ನು ಆದಷ್ಟು ಮುಂದೆ ತಳ್ಳುವ ಎಂಬ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದೂ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.