ಸ್ಥಳೀಯ ಸಂಸ್ಥೆಗಳ ದಾಖಲೆ ಮೂರು ತಿಂಗಳೊಳಗೆ ಗಣಕೀಕರಣಕ್ಕೆ 'ಹೈ' ಆದೇಶ
ಬೆಂಗಳೂರು: ನಗರಾಭಿವೃದ್ಧಿ, ಕಂದಾಯ, ಅರಣ್ಯ ಇಲಾಖೆ ಹಾಗೂ ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ದಾಖಲೆಗಳನ್ನು 3 ತಿಂಗಳೊಳಗೆ ಗಣಕೀಕರಣಗೊಳಿಸಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಭೂ ದಾಖಲೆಗಳ ಅಕ್ರಮ ವರ್ಗಾವಣೆ ನಿಯಂತ್ರಿಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಚನ್ನವೀರಗೌಡ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹುಲವಾಡಿ ಜಿ. ರಮೇಶ ಅವರ ಪೀಠ ಈ ಗಡುವು ನೀಡಿದೆ. ಅಲ್ಲದೇ ಇಲಾಖೆಗಳಲ್ಲಿ ನಾಪತ್ತೆಯಾದ ದಾಖಲೆಗಳ ಬಗ್ಗೆ ಗುಪ್ತ ತನಿಖೆ ನಡೆಸಿ ಪತ್ತೆ ಹಚ್ಚಬೇಕು. ಹಾಗೂ ಲಭ್ಯವಿಲ್ಲದ ದಾಖಲೆಗಳ ಬಗ್ಗೆ ಸಮೀಕ್ಷೆ ನಡೆಸಿ ಸಮಗ್ರವಾಗಿ ಸಿದ್ದಪಡಿಸಬೇಕು ಎಂದು ಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ. ಸರ್ಕಾರಿ ಜಮೀನು ಕುರಿತು ಸಮಗ್ರ ದಾಖಲೆಗಳ ದತ್ತಾಂಶಗಳನ್ನು ಗಣಕೀಕೃತಗೊಳಿಸುವ 'ಭೂಮಿ ಯೋಜನೆ' ಪ್ರಗತಿಯಲ್ಲಿದೆ. ಎಲ್ಲಾ ಸ್ಥಳೀಯ ಸಂಸ್ಥೆಗಳ ದಾಖಲೆಗಳನ್ನು ಗಣಕೀಕರಣ ಮಾಡಲಾಗುತ್ತಿದ್ದು ಇದಕ್ಕೆ ಕಾಲಾವಕಾಶ ನೀಡಬೇಕು ಎಂದು ಸರ್ಕಾರಿ ವಕೀಲರು ಕೋರಿದರು. ರಾಜ್ಯದಲ್ಲಿ ಸರ್ಕಾರಿ ಜಮೀನು ಕುರಿತ ದಾಖಲೆಗಳ ಅಕ್ರಮ ವರ್ಗಾವಣೆ ನಡೆಸುತ್ತಿದೆ. ಅಲ್ಲದೇ, ಸರ್ಕಾರಿ ಜಮೀನು ಕಬಳಿಸಿ ಬಡಾವಣೆ ನಿರ್ಮಿಸಲಾಗುತ್ತಿದೆ. ಅಕ್ರಮ ತಡೆಗಟ್ಟಲು ಸರ್ಕಾರ ವಿಫಲವಾಗಿರುವ ಸರ್ಕಾರಿ ಜಮೀನು ರಕ್ಷಣೆಯನ್ನು ನಿರ್ಲಕ್ಷ್ಯಿಸಿದೆ. ಹೈಕೋರ್ಟ್ ಹಲವು ಬಾರಿ ನಿರ್ದೇಶನ ನೀಡಿದ್ದರೂ ಸರ್ಕಾರಿ ಜಮೀನುಗಳ ದಾಖಲೆ ಗಣಕೀಕರಣ ಪೂರ್ಣಗೊಳಿಸಿಲ್ಲ ಎಂದು ಅರ್ಜಿದಾರರ ಪರ ವಕೀಲರು ಪೀಠದ ಗಮನಕ್ಕೆ ತಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

