ವಯನಾಡಲ್ಲಿ ಮಳೆ: ಕಬಿನಿಗೆ ನೀರು
ಮೈಸೂರು/ಮಂಗಳೂರು/ಹುಣಸೂರು: ಕಳೆದೆರಡು ದಿನಗಳಿಂದ ಸ್ವಲ್ಪ ಮಂಕಾಗಿದ್ದ ಮಳೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಸೋಮವಾರ ಧಾರಾಕಾರವಾಗಿ ಸುರಿಯುತ್ತಿದ್ದರೆ, ಕೇರಳದ ವಯನಾಡ್ ಪ್ರದೇಶದಲ್ಲಾಗುತ್ತಿರುವ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಲಕ್ಷ್ಮಣತೀರ್ಥ ನದಿ ಮೈದುಂಬಿ ಹರಿಯುತ್ತಿದೆ. ಮತ್ತೊಂದೆಡೆ ಭಾರಿ ಮಳೆಯಿಂದಾಗಿ ಕೊಡಗು ಜಿಲ್ಲೆಯ ಮಡಿಕೇರಿ - ಅಬ್ಬಿಪಾಲ್ಸ್ ರಸ್ತೆಯಲ್ಲಿ ಭೂಕುಸಿತದಿಂದಾಗಿ ಕೆಲವು ಕಾಲ ಸಂಚಾರ ವ್ಯತ್ಯಯವಾಗಿತ್ತು. ಕರಾವಳಿಯಲ್ಲಿ ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಟ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ವಿವಿಧೆಡೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವಡೆ ಕೃತಕ ನೆರೆಯುಂಟಾಗಿದೆ. ಆಸ್ತಿ ಹಾನಿ ಸಂಭವಿಸಿದೆ. ಮರಗಳು ನೆಲಕ್ಕುರುಳಿವೆ.
ವಯನಾಡ್ ಎಫೆಕ್ಟ್-ಕಬಿನಿಗೆ ಹೆಚ್ಚಾದ ಒಳ ಹರಿವು: ಕೇರಳದ ವಯನಾಡ್ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿ. ಈಗಿನ 2261 ಅಡಿಯಾಗಿದೆ. ಸುಮಾರು 15 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಯಿಂದ 100 ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ. ಪ್ರತಿ ದಿನ ಜಲಾಶಯದ ಮಟ್ಟದಲ್ಲಿ 2ರಿಂದ 3 ಅಡಿಗಳಷ್ಟು ನೀರು ಹೆಚ್ಚಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

