ಪ್ರಧಾನ ಸುದ್ದಿ

ತುಂಗಭದ್ರಾ ಡ್ಯಾಂ: ಒಳ ಹರಿವು ಹೆಚ್ಚಳ

Published On :

ಬೆಂಗಳೂರು: ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಭದ್ರಾ ಜಲಾಶಯದಿಂದ ನದಿಗೆ ನೀರನ್ನು ಬಿಡುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಗುರುವಾರ ಹಾಗೂ ಶುಕ್ರವಾರ ತುಂಗಭದ್ರಾ ಜಲಾಶಯಕ್ಕೆ ಸುಮಾರು 18,961 ಕ್ಯುಸೆಕ್ ನೀರು ಹರಿದು ಬಂದಿದೆ. ಅಲ್ಲದೆ, ಗುರುವಾರ ಸುಮಾರು 8,523 ಕ್ಯುಸೆಕ್ ಮತ್ತು ಶುಕ್ರವಾರ 10,468 ಕ್ಯುಸೆಕ್ ನೀರು ಹರಿದು ಬಂದಿದೆ. ಎರಡು ದಿನಗಳಲ್ಲಿ ಸುಮಾರು 1.5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದ್ದು, ಇದು ಪ್ರಸಕ್ತ ಸಾಲಿನಲ್ಲಿ ಜಲಾಶಯಕ್ಕೆ ಹರಿದು ಬಂದ ಅತ್ಯಧಿಕ ನೀರಿನ ಪ್ರಮಾಣವಾಗಿದೆ. ಶುಕ್ರವಾರ ಜಲಾಶಯದ ನೀರಿನ ಮಟ್ಟ ಸುಮಾರು 1586.27 ಅಡಿಗಳಷ್ಟಿತ್ತು.
ಇದೇ ವೇಳೆ, ಹೇಮಾವತಿ ಜಲಾಶಯಕ್ಕೆ ಶುಕ್ರವಾರ 3641 ಕ್ಯುಸೆಕ್ ನೀರು ಹರಿದು ಬಂದಿದೆ. ಈ ಜಲಾಶಯ ಗರಿಷ್ಠ ಮಟ್ಟ 2922 ಅಡಿ. ಶುಕ್ರವಾರದ ಮಟ್ಟ 2872.50 ಅಡಿ. ಹೊರ ಹರಿವು 100 ಕ್ಯುಸೆಕ್ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.