ಪ್ರಧಾನ ಸುದ್ದಿ

ಕೇದಾರ ಮಂದಿರದ 18 ಟ್ರಸ್ಟಿಗಳು ನಾಪತ್ತೆ

Published On :

ದಾವಣಗೆರೆ: ಕೇದಾರನಾಥ ಮಂದಿರ ಟ್ರಸ್ಟ್‌ನ 18 ಮಂದಿ ಟ್ರಸ್ಟಿಗಳು ಜಲಪ್ರಳಯದ ವೇಳೆ ನಾಪತ್ತೆಯಾಗಿದ್ದು, ಸದ್ಯಕ್ಕೆ ಯಾರ ಬಗ್ಗೆಯೂ ಮಾಹಿತಿ ಲಭ್ಯವಾಗಿಲ್ಲ ಎಂಬ ಅಂಶವನ್ನು ಅಲ್ಲಿನ ನಿವಾಸಿಗಳು ಸ್ಪಷ್ಟಪಡಿಸಿದ್ದಾರೆ. ಜಲಪ್ರಳಯದ ದಿನದಂದು ದೇವಸ್ಥಾನದ ಆವರಣದಲ್ಲಿ, ಕೇದಾರನಾಥದ ಮಂದಿರದ ಮುಂಭಾಗದಲ್ಲಿ ಇದ್ದಂತಹ ಸುಮಾರು 18 ಮಂದಿ ಟ್ರಸ್ಟಿಗಳೂ ಜಲಸಮಾಧಿಯಾಗಿದ್ದಾರೋ ಅಥವಾ ಜೀವಂತವಾಗಿದ್ದಾರೋ ಎಂಬುದಂತೂ ಸ್ಪಷ್ಟವಾಗಿಲ್ಲ. ಯಾರೊಬ್ಬರ ಬಗ್ಗೆ ಮಾಹಿತಿ ಈವರೆಗೂ ಲಭ್ಯವಾಗಿಲ್ಲ ಎನ್ನಲಾಗಿದೆ. ಟ್ರಸ್ಟಿಗಳು ಕಣ್ಮರೆಯಾದರೆ ನಿತ್ಯ ಕೇದಾರ ಬಾಬಾನ ಪೂಜೆ ಸೇರಿದಂತೆ ಧಾರ್ಮಿಕ ವಿಧಿವಿಧಾನ ನೆರವೇರಿಸುತ್ತಿದ್ದ ಅರ್ಚಕರ ಪೈಕಿ ಯಾರೊಬ್ಬರಿಗೂ ಜಲಪ್ರಳಯದಿಂದ ಯಾವುದೇ ಅನಾಹುತವಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಅಲ್ಲದೇ, ಮಂದಿರದಲ್ಲಿ ಪೂಜೆ ನೆರವೇರಿಸುತ್ತಿದ್ದವರೂ ಕೂಡ ಅಪಾಯದಿಂದ ಪಾರಾಗಿದ್ದಾರೆ. ಆದರೆ, ಟ್ರಸ್ಟಿಗಳ ಬಗ್ಗೆ ಮಾತ್ರ ಮಾಹಿತಿ ಇಲ್ಲ ಎಂಬುದಾಗಿ ಗೊತ್ತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.