ಪ್ರಧಾನ ಸುದ್ದಿ

ಗ್ಯಾಂಗ್‌ರೇಪ್ ನಾಲ್ವರು ವಶಕ್ಕೆ

Published On :

ಉಡುಪಿ:  ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ನಾಲ್ವರು ಆಟೋ ಚಾಲಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
 ಈಗಾಗಲೇ 30ರಿಂದ 40 ಜನರನ್ನು ವಿಚಾರಣೆಗೊಳಪಡಿಸಲಾಗಿದೆ. ನಿರ್ದಿಷ್ಟವಾಗಿ ಈ ನಾಲ್ವರು ಆಟೋ ಚಾಲಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇವರೇ ಪ್ರಮುಖ ಅತ್ಯಾಚಾರಿಗಳಾಗಿದ್ದು ಬಂಧನದ ಪ್ರಕ್ರಿಯೆಗೊಳಿಪಡಿಸುವುದು ಬಾಕಿ ಇದೆ. ತನಿಖೆಗೆ ರಚಿಸಿರುವ 8 ತಂಡಗಳ ಪೈಕಿ 3 ತಂಡಗಳು ಮಣಿಪಾಲ ಹಾಗೂ ಸುತ್ತಲಿನ 10 ಸಾವಿರಕ್ಕೂ ಅಧಿಕ ಆಟೋಗಳನ್ನು ಪರಿಶೀಲನೆ ನಡೆಸಿ,  ಚಾಲಕರನ್ನು ವಿಚಾರಣೆಗೊಳಪಡಿಸಿವೆ ಎಂದು ಎಸ್‌ಪಿ ಡಾ.ಬೋರಲಿಂಗಯ್ಯ ತಿಳಿಸಿದ್ದಾರೆ.
   
ಗೃಹ ಸಚಿವ ಜಾರ್ಜ್ ಭೇಟಿ: ಅತ್ಯಾಚಾರಕ್ಕೊಳಗಾದ ವೈದ್ಯ ವಿದ್ಯಾರ್ಥಿನಿಯನ್ನು ಗೃಹ ಸಚಿವ ಕೆ.ಜೆ. ಜಾರ್ಜ್ ಮತ್ತು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಭಾನುವಾರ ಕೆಎಂಸಿ ಆಸ್ಪತ್ರೆಯಲ್ಲಿ ಭೇಟಿಯಾಗಿ, ಆಕೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿಮ್ಮೊಂದಿಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಯುವತಿಯ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ಖರ್ಚು ವೆಚ್ಚಗಳನ್ನು ಸರ್ಕಾರವೇ ಭರಿಸುತ್ತದೆ ಎಂದು ಯುವತಿಯ ತಾಯಿಗೆ ಭರವಸೆ ನೀಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಎಲ್ಲ ರೀತಿಯಿಂದಲೂ ಒತ್ತಡ ಮುಕ್ತವಾಗಿವೆ. ಕಾನೂನಿನ ಚೌಕಟ್ಟಿನಲ್ಲಿ ಯಾವುದೇ ರೀತಿಯ ಕಾರ್ಯಾಚರಣೆಗಳನ್ನು ನಡೆಸುವುದಕ್ಕೆ ಪೊಲೀಸ್ ಠಾಣೆಗಳು ಸ್ವತಂತ್ರವಾಗಿವೆ ಎಂದರು. ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಉಡುಪಿ ಹಾಗೂ ಮಂಗಳೂರಿನಲ್ಲಿ ಪ್ರತಿಭಟನೆ ಮುಂದುವರಿದಿದ್ದು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.