ಹೊಸ ಮದ್ಯದ ಅಂಗಡಿಗೆ ಲೈಸೆನ್ಸ್ ಇಲ್ಲ

ಕನ್ನಡಪ್ರಭ ವಾರ್ತೆ ಬೆಂಗಳೂರು ಜೂ.23-
ರಾಜ್ಯದಲ್ಲಿ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಮೂಲಕ ಮದ್ಯದಂಗಡಿಗೆ ಪರವಾನಗಿ ನೀಡುವ ವಿಚಾರದಲ್ಲಿ ಸಿದ್ದರಾಮಯ್ಯ ತಮ್ಮ ಹೇಳಿಕೆ ಬದಲಿಸಿದ್ದು, ಈ ವಿಚಾರದಲ್ಲಿ ಮಾಧ್ಯಮಗಳೇ ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡಿವೆ ಎಂದಿದ್ದಾರೆ.
ಈ ಹಿಂದೆ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಬಗ್ಗೆ ಪ್ರಸ್ತಾಪಿಸಿದ್ದ ಸಿದ್ದರಾಮಯ್ಯ ಅವರು, ಈ ಸಂದರ್ಭದಲ್ಲಿ ಪದವೀಧರರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದರು. ಈ ಕುರಿತಂತೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು, ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ವಿಚಾರ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.
ಭಾನುವಾರ ಜನತಾ ದರ್ಶನ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 1997ರಿಂದ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡಿಲ್ಲ. ನಮ್ಮ ಸರ್ಕಾರವೂ ಪರವಾನಗಿ ನೀಡುವುದಿಲ್ಲ. ಹೀಗಿರುವಾಗ ಈ ಕುರಿತು ಅರ್ಜಿಗಳ ಪರಿಶೀಲನೆ ಮಾಡುವ ಪ್ರಶ್ನೆ ಎಲ್ಲಿ ಬಂತು? ಎಂದು ಪ್ರಶ್ನಿಸಿದರಲ್ಲದೆ, ನಾನು ಎಲ್ಲಿಯೂ ಈ ವಿಚಾರ ಮಾತನಾಡಿಯೇ ಇಲ್ಲ. ಇವೆಲ್ಲವೂ ಮಾಧ್ಯಮಗಳ ಸೃಷ್ಟಿ ಎಂದರು.
ಉತ್ತರಾಖಂಡದಲ್ಲಿ ಕಾಣಿಸಿಕೊಂಡಿರುವ ಪ್ರವಾಹದಲ್ಲಿ ರಾಜ್ಯದ ನಾಗರಿಕರು ಸಿಲುಕಿಕೊಂಡಿರುವ ಕುರಿತು ಪ್ರಸ್ತಾಪಿಸಿದ ಅವರು, ಈಗಾಗಲೇ ರಾಜ್ಯದ 200ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಇನ್ನುಳಿದವರನ್ನೂ ರಕ್ಷಿಸುವ ಕಾರ್ಯ ನಡೆಯುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ತೀವ್ರ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


