ಪ್ರಧಾನ ಸುದ್ದಿ

ಬಿಎಸ್‌ವೈ-ನಿರಾಣಿಗೆ 'ಲೋಕಾ' ಸಮನ್ಸ್

Published On :

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಕೆಐಎಡಿಬಿ ಭೂಮಿ ವಾಪಸ್ ಪಡೆದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಮುರುಗೇಶ ನಿರಾಣಿ ಅವರಿಗೆ ಲೋಕಾಯುಕ್ತ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಜುಲೈ 27ರಂದು ಖುದ್ದು ಹಾಜರಿಗೆ ಸೂಚಿಸಿದೆ.
ದೇವನಹಳ್ಳಿ ಸಮೀಪ ಬಡವರಿಗಾಗಿ ಮನೆ ನಿರ್ಮಾಣ ಯೋಜನೆಗಾಗಿ ಉದ್ಯಮಿ ಅಲಂ ಪಾಷಾ ಅವರಿಗೆ 26 ಎಕರೆ ಭೂಮಿಯನ್ನು ಕೆಐಎಡಿಬಿ ಮಂಜೂರು ಮಾಡಿತ್ತು. ಬಳಿಕ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ ನಿರಾಣಿ ನಕಲಿ ದಾಖಲೆ ಸೃಷ್ಟಿಸಿ ಮಂಜೂರು ಮಾಡಿದ್ದ ಭೂಮಿಯನ್ನು ವಾಪಸ್ ಪಡೆದಿದ್ದಾರೆ ಎಂದು ಆರೋಪಿಸಿ ಅಲಂ ಪಾಷಾ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಲೋಕಾಯುಕ್ತ ಅಧಿಕಾರಿಗಳಿಗೆ ಒಪ್ಪಿಸಿತ್ತು. ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.  ಪ್ರಕರಣ ಸಂಬಂಧ ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಿರಾಣಿ ಅರ್ಜಿ ಮುಂದಕ್ಕೆ: ಕೆಐಎಡಿಬಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಅರ್ಜಿ ವಿಚಾರಣೆಯನ್ನು ಲೋಕಾಯುಕ್ತ ನ್ಯಾಯಾಲಯ ಪೂರ್ಣಗೊಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.