ಪ್ರಧಾನ ಸುದ್ದಿ

ಡೆಂಘೀ ಪ್ರತಾಪ: ಮೂವರು ಮಕ್ಕಳು ಸೇರಿ ಐವರ ಸಾವು

Published On :

ಬೆಂಗಳೂರು: ಡೆಂಘೀ ಜ್ವರಕ್ಕೆ ಗುರುವಾರ ಮೂವರು ಮಕ್ಕಳು ಸೇರಿದಂತೆ ಒಟ್ಟು ಐವರು ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯ ಕೊಟಗಿ ಕಿರಣ್(11) ಹಾಗೂ ಹಳೇ ಹಗರಿಬೊಮ್ಮನಹಳ್ಳಿಯ ಗೋಟೂರು ಮಂಗಳಾ(11), ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಮೀನಾಕ್ಷಿ ಮರಡಿ(14) ಮೃತಪಟ್ಟ ಮಕ್ಕಳು.
ಮಾಗಡಿ ತಾಲೂಕಿನ ಮರಲಗೊಂಡಲದ ವಾಸಿ ಶ್ರೀಧರ್(26) ಹಾಗೂ ಜಗಳೂರು ತಾಲೂಕಿನ ಸುಂದರನಾಯ್ಕ್(30) ಮೃತಪಟ್ಟ ಯುವಕರು. ಕಳೆದ 15 ದಿನಗಳಿಂದ ಬಾಲಕ ಕಿರಣ್ ಜ್ವರದಿಂದ ಬಳಲುತ್ತಿದ್ದ, ಇತ್ತೀಚೆಗಷ್ಟೇ ಆತನನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ ಮೃತಪಟ್ಟಿದ್ದಾನೆ. ಅದೇ ರೀತಿ, ಗೋಟೂರು ಮಂಗಳಾ ಕೂಡಾ ನಾಲ್ಕೈದು ದಿನಗಳಿಂದ ಜ್ವರಪೀಡಿತಳಾಗಿದ್ದಳು.

ಹಗರಿಬೊಮ್ಮನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಮೊದಲಿಗೆ ದಾಖಲಿಸಲಾಗಿತ್ತು. ಬಳಿಕ ಆಕೆಯನ್ನು ಬಳ್ಳಾರಿಯ ವಿಮ್ಸ್‌ಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ಪುರಸಭೆ ಸದಸ್ಯರೊಬ್ಬರ ಪುತ್ರಿ ಮಿನಾಕ್ಷಿ ಮರಡಿ ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಳು. ಆಕೆಯನ್ನು ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಯುವ ಚಾಲಕ ಬಲಿ: ಮಾಗಡಿ ತಾಲೂಕಿನ ಮರಲಗೊಂಡಲದ ನಿವಾಸಿ, ಬಸ್ ಚಾಲಕ ಶ್ರೀಧರ್ ಅವರಿಗೆ ಜ್ವರ ಕಾಣಿಸಿಕೊಂಡ ಕೂಡಲೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ರಕ್ತ ಪರೀಕ್ಷೆ ವೇಳೆ ಡೆಂಘೀ ಇರುವುದು ಗೊತ್ತಾದ ತಕ್ಷಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸಿದೆ ಅವರೂ ಗುರುವಾರ ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಗ್ಗೇನಹಳ್ಳಿ ಸುಂದರನಾಯ್ಕ್ ಅನಾರೋಗ್ಯದಿಂದಾಗಿ ತಮ್ಮ ಊರಿಗೆ ಬಂದಿದ್ದರು. ಅವರನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಈ ಸಂದರ್ಭದಲ್ಲಿ ಶಂಕಿತ ಡೆಂಘೀ ಇರುವುದು ಗೊತ್ತಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಅವರು ಗುರುವಾರ ಬೆಳಗ್ಗೆ ಮೃತಪ್ಟಟಿದ್ದಾರೆ.

ಬೈಯಂಡಹಳ್ಳಿ ಬಳಿ ವ್ಯಕ್ತಿ ಕೊಲೆ
ನೆಲಮಂಗಲ:
ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈಯಂಡಹಳ್ಳಿಯಲ್ಲಿ ಬಡಾವಣೆಯೊಂದರಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಕೊಲೆಗೈದು ಸುಟ್ಟು ಹಾಕಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಕೊಲೆಗೀಡಾದ ವ್ಯಕ್ತ ಅಪರಿಚಿತ ವ್ಯಕ್ತಿಯಾಗಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.