ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ
ಸುಳ್ಯ: ಮತದಾನಕ್ಕೆ ಮುನ್ನಾ ದಿನ ಶನಿವಾರ ಮರ್ಕಂಜ ಸಮೀಪದ ಕುದ್ಕುಳಿ ಗ್ರಾಮದಲ್ಲಿ ಮತಯಾಚನೆ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರತ್ಯೇಕ ದೂರು ದಾಖಲಾಗಿವೆ. ಕಾಂಗ್ರೆಸ್ನ ಜಿಪಂ ಸದಸ್ಯೆ ಸರಸ್ವತಿ ಕಾಮತ್, ಗ್ರಾಪಂ ಮಾಜಿ ಅಧ್ಯಕ್ಷ ಎನ್.ಎಸ್. ವೆಂಕಪ್ಪ ಗೌಡ ಹಾಗೂ ಇತರರು ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಬಿಜೆಪಿಯ ತಾಪಂ ಮಾಜಿ ಉಪಾಧ್ಯಕ್ಷ ಹರೀಶ್ ಕಂಜಿಪಿಲಿ, ಈಶ್ವರಪ್ಪ ಹರ್ಲಡ್ಕ, ರವಿಚಂದ್ರ ಹಾಗೂ ಇತರರ ನಡುವೆ ಮಾತಿನ ಚಕಮಕಿ ನಡೆದಿದೆ. ಸರಸ್ವತಿ ಕಾಮತ್, ಹರೀಶ್ ಕಂಜಿಪಿಲಿ ನಡುವೆ ಸಂಘರ್ಷ ತಾರಕ್ಕೇರುತ್ತಿದ್ದಂತೆ ಉಭಯ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಕುರಿತು ಚಂದ್ರಶೇಖರ ನಾಯ್ಕ್ ಎಂಬವರು 'ಸರಸ್ವತಿ ಕಾಮತ್ ಮತ್ತಿತರರು ನಮಗೆ ಹಣ ಹಂಚಲು ಬಂದಾಗ ನಾವು ನಿರಾಕರಿಸಿದೆವು. ಆಗ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ' ಎಂದು ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸರಸ್ವತಿ ಕಾಮತ್ ಅವರು 'ಮತಯಾಚನೆಗೆ ಹೋದಾಗ ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಸೀರೆ ಎಳೆದಿದ್ದಾರೆ' ಎಂದು ದೂರು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

