ಬಳ್ಳಾರಿ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಿ. ತಾಯಣ್ಣ ಅವರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ನಗರದ ಆರ್.ಕೆ. ನಸಿಂರ್ಗ್ ಹೋಂನಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿ. ತಾಯಣ್ಣ ಇತ್ತೀಚೆಗೆ ರಕ್ತದೊತ್ತಡ ಹಾಗೂ ಮದುಮೇಹದಿಂದ ಬಳಲುತ್ತಿದ್ದು, ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಹೆಚ್ಚಾಗಿ ಸುತ್ತಾಡಿದ ಪರಿಣಾಮ ಹೃದಯಾಘಾತಕ್ಕೆ ಒಳಗಾಗಿದ್ದಾರೆ.