ಹಲವೆಡೆ ಘರ್ಷಣೆ, ಲಾಠಿ ಪ್ರಹಾರ
ಬೆಂಗಳೂರು: ಮುಕ್ತ ಮತ್ತು ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ಸಾಕಷ್ಟು ಪ್ರಯತ್ನ ಮಾಡಿದರೂ ಹಲವೆಡೆ ಘರ್ಷಣೆ, ಲಾಠಿ ಪ್ರಹಾರ ಮುಂತಾದ ಘಟನೆಗಳು ವರದಿಯಾಗಿವೆ.
ಕೋಲಾರದಲ್ಲಿ ಆಂಧ್ರಪ್ರದೇಶದ ರಾಯಲಸೀಮಾ ಮಾದರಿಯಲ್ಲಿ ಗುಂಪೊಂದು ಲಾಂಗ್, ದೊಣ್ಣೆಗಳೊಂದಿಗೆ ಸರ್ಕಾರಿ ಜೂನಿಯರ್ ಕಾಲೇಜಿನ ಮತಗಟ್ಟೆ ಹೊರಗೆ ಸುತ್ತಾಡಿ ಭೀತಿಯ ವಾತಾವರಣ ಸೃಷ್ಟಿಸಿತ್ತು. ಪೊಲೀಸರ ಕಣ್ಣೆದುರಲ್ಲೇ ಈ ಕೃತ್ಯ ನಡೆದಿತ್ತು. ಮತಗಟ್ಟೆ ಬಳಿ ಪಕ್ಷೇತರ ಅಭ್ಯರ್ಥಿ ಸಚಿವ ವರ್ತೂರು ಪ್ರಕಾಶ್ ಬೆಂಬಲಿಗರು ಮತ್ತು ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹಮದ್ ಬೆಂಬಲಿಗರ ಮಧ್ಯೆ ನಡೆದ ಹಲ್ಲೆ ಪ್ರಕರಣ ಇದಕ್ಕೆ ಕಾರಣ.
ಈ ಸಂಬಂಧ ಪೊಲೀಸರು ನಗರಸಭಾ ಸದಸ್ಯ, ಕೋಲಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಆದ ಪ್ರಸಾದ್ಬಾಬು, ಆತನ ಸಹೋದರ ಕುಮಾರ್ ಸೇರಿದಂತೆ ಇನ್ನಿತರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮಾರಕಾಸ್ತ್ರಗಳ ಸಮೇತ ಸಿಕ್ಕಿಬಿದ್ದ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ, ಸಹೋದರನ ಮೇಲೆ ಹಲ್ಲೆ ನಡೆಸಿದವರನ್ನು ಹುಡುಕಲು ಮುಂದಾಗಿದ್ದ ನಗರಸಭೆ ಸದಸ್ಯ ಪ್ರಸಾದ್ಬಾಬು ಅವರನ್ನು ಸಹ ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದಿದ್ದರಾದರೂ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗೆ ಚಳ್ಳೆಹಣ್ಣು ತಿನ್ನಿಸಿ ಪ್ರಸಾದ್ ಬಾಬು ಪಾರಾರಿಯಾಗಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವುದು ವೀಡಿಯೋ ಚಿತ್ರೀಕರಣದಲ್ಲಿ ಕಂಡು ಬಂದಿದೆ.
ಅಭ್ಯರ್ಥಿ ಮೇಲೆ ಹಲ್ಲೆ: ಕೋಲಾರ ಜಿಲ್ಲೆ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರಾಜಕೀಯ ದ್ವೇಷದಿಂದ ಹಲ್ಲೆ ನಡೆದಿದೆ. ಬೆಳಗಿನ ಜಾವ ರಾಮಚಂದ್ರ ಅವರು ತಮ್ಮ ಗ್ರಾಮದಿಂದ ಪಟ್ಟಣಕ್ಕೆ ಬರುತ್ತಿದ್ದಾಗ ಮುಸುಕುಧಾರಿಗಳ ಗುಂಪು ಅವರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದೆ. ತೀವ್ರ ಗಾಯಗೊಂಡಿರುವ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಡುವಾಳು ಗ್ರಾಮದಲ್ಲಿ ಮತಗಟ್ಟೆ ಬಳಿ ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮತಕೇಂದ್ರದ 200 ಮೀಟರ್ ವ್ಯಾಪ್ತಿಯೊಳಗೆ ಗ್ರಾಮದ ಕೆಲವರು ಗುಂಪು ಕಟ್ಟಿಕೊಂಡು ಮಾತಿನಲ್ಲಿ ತೊಡಗಿದ್ದರು. ಅವರನ್ನು ಹೊರಕಳುಹಿಸಲು ಪೊಲೀಸರು ಯತ್ನಿಸಿದಾಗ ಗುಂಪು ಅವರ ವಿರುದ್ಧವೇ ತಿರುಗಿಬಿತ್ತು. ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು.
ಪೊಲೀಸರಿಗೆ ಗಾಯ: ಬೆಳಗಾವಿ ಜಿಲ್ಲೆಂು ಅಥಣಿ ತಾಲೂಕಿನ ಕಾಗವಾಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಂು ಅನಂತಪುರದ ಮತದಾನ ಕೇಂದ್ರದಲ್ಲಿ ಏಕಾಏಕಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಹಲವೆಡೆ ಘರ್ಷಣೆ, ಲಾಠಿ ಪ್ರಹಾರ
ಘಟನೆಯಲ್ಲಿ ಎರಡು ಬಸ್, ಕೆಎಸ್ಆರ್ಪಿ, ಪೊಲೀಸ್ ವಾಹನಗಳು ಜಖಂಗೊಂಡಿವೆ. ಇದರಿಂದ ಕೆಲ ಕಾಲ ಮತದಾನವನ್ನೂ ಸ್ಥಗಿತಗೊಳಿಸಲಾಯಿತು. ಕಲ್ಲು ತೂರಾಟದಿಂದ ಸಿಪಿಐ ದಿವಾಕರ, ಪಿಎಸ್ಐ ಶಂಕರಗೌಡ ಬಸನಗೌಡರ್ ಸೇರಿದಂತೆ 12 ಜನರು ಗಾಯಗೊಂಡಿದ್ದಾರೆ.
ಔರಾದ್ ತಾಲೂಕಿನ ನಾಗಮಾರಪಲ್ಲಿ ಗ್ರಾಮದಲ್ಲಿ ಕೆಜೆಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರಿದ್ದ ವಾಹನಕ್ಕೆ ಕಲ್ಲು ತೂರಾಟ ನಡೆದು, ಶಾಸಕ ಸೇರಿದಂತೆ ಒಟ್ಟು 8 ಜನರಿಗೆ ಗಾಯಗಳಾಗಿವೆ. ಇದರಿಂದ ಕೆಲಕಾಲ ಮತದಾನ ಸ್ಥಗಿತಗೊಂಡಿತ್ತು.
ಬೆಳಗಾವಿ ದಕ್ಷಿಣ ವಿಧಾನಸಭೆ ಕ್ಷೇತ್ರದ ಎಂಇಎಸ್ ಅಭ್ಯರ್ಥಿ ಸಂಭಾಜೀ ಪಾಟೀಲ ಹಾಗೂ ಅವರ ಬೆಂಬಲಿಗರು ಬಿಜೆಪಿ ಅಭ್ಯರ್ಥಿ, ಶಾಸಕ ಅಭಯ ಪಾಟೀಲ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದು ಅವರ ಅಂಗಿ ಹರಿದೆಳೆದು, ತಳ್ಳಾಟ ನಡೆಸಿದ್ದಾರೆ.
ರಾಂುಬಾಗ ತಾಲೂಕಿನ ಕುಡಚಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಂುಲ್ಲಿರುವ ಜುನೇದ್ ಹೈಸ್ಕೂಲ್ನ ಹಳೆಂು ಕಟ್ಟಡದ ಬಳಿ, ಬಿಎಸ್ಆರ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
ಮತದಾರರ ಮನವೊಲಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಕಾರ್ಯಕರ್ತರು ಮಚ್ಚಿನಿಂದ ಬಾಬಾಜಾನ್ ಮೇಲೆ ಹಲ್ಲೆ ಮಾಡಿದ್ದಾರೆ. ತಾಲೂಕಿನ ಆನೆಮಡುಗುವಿನಲ್ಲೂ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಉದ್ರಿಕ್ತ ಗುಂಪನ್ನು ಚದುರಿಸಿದ್ದಾರೆ.
ಚಿಂತಾಮಣಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಡಿಹಳ್ಳಿಯಲ್ಲಿ ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಡಾ.ಎಂ.ಸಿ. ಸುಧಾಕರ್ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಮತ್ತೊಂದೆಡೆ, ಅಧಿಕಾರಿಗಳು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಏಜೆಂಟ್ಶ್ರೀನಿವಾಸ್, ಮತ್ತಿತರರು ಕೋನಪಲ್ಲಿಯ ಮತಗಟ್ಟೆಗೆ ಬಂದು ಸೀಮೆಎಣ್ಣೆ ಹಾಕಿ ಸುಟ್ಟು ಬಿಡುತ್ತೇವೆ ಎಂದು ಬೆದರಿಕೆ ಹಾಕಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ಸೀಮೆಎಣ್ಣೆ ವಶಪಡಿಸಿಕೊಂಡಿದ್ದಾರೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಿಲುಗಂಬಾ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಗರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ.
ಮತದಾನ ಬಹಿಷ್ಕಾರ: ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕರಿಕಟ್ಟಿ ಹಾಗೂ ಬೋಗೂರ ಗ್ರಾಮಸ್ಥರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ್ದರು. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ದೊಡ್ಡ ಹುಸೇನಪುರದಲ್ಲಿ ಗ್ರಾಮಸ್ಥರು ಮೂಲಸೌಕರ್ಯಕ್ಕೆ ಆಗ್ರಹಿಸಿ ಮತದಾನದಿಂದ ದೂರ ಉಳಿದಿದ್ದರು. ಕೊನೆಗೆ ಗ್ರಾಮಸ್ಥರ ಮನವೊಲಿಸಿದ ಪರಿಣಾಮ ಮಧ್ಯಾಹ್ನ 2 ಗಂಟೆ ನಂತರ ಅವರೆಲ್ಲರೂ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

