ಆನೆ ದಾಳಿ: ಸ್ಥಳದಲ್ಲೇ ವ್ಯಕ್ತಿ ಸಾವು
ಕ.ಪ್ರ.ವಾರ್ತೆ ಮೂಡಿಗೆರೆ ಮೇ.5
ಹಾಲು ಹಾಕಲು ಹೋಗುತ್ತಿದ್ದ ವ್ಯಕ್ತಿಯೊಬ್ಬ ಒಂಟಿ ಸಲಗದ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಣಕಲ್ ಹೋಬಳಿಯ ಫಲ್ಗುಣಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ನಮೀದ್ ನಜೀರ್ (55) ಮೃತ ಪಟ್ಟವರು. ನಜೀರ್ ಎಂದಿನಂತೆ ಕೆಲವು ಮನೆಗಳಿಗೆ ಹಾಲು ಹಾಕಿ, ಮತ ಚಲಾಯಿಸಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದರು.
ಸ್ವಲ್ಪ ದೂರ ಹೋಗುತ್ತಿದ್ದಂತೆ ಕಲಾನಾಥೇಶ್ವರ ದೇವಾಲಯದ ಕಡೆಯಿಂದ ಆಗಮಿಸಿದ ಒಂಟಿ ಸಲಗ ಎದುರಿಗೆ ಸಿಕ್ಕ ನಜೀರ್ ಅವರನ್ನು ಎತ್ತಿ ಎಸೆದಿದೆ. ಅಲ್ಲದೇ ನಜೀರ್ ಶವದ ಮೇಲೆ ಮರವೊಂದನ್ನು ತಂದು ಹಾಕಿ, ಕಾಡಿನೆಡೆಗೆ ಪಯಣ ಬೆಳೆಸಿದೆ.
ಸಾರ್ವಜನಿಕರಿಂದ ಪ್ರತಿಭಟನೆ: ತಾಲೂಕಿನ ಬಣಕಲ್ ಹೋಬಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂಟಿಸಲಗದ ಹಾವಳಿ ಅತಿಯಾಗಿದ್ದು, ಆನೆ ಹಾವಳಿಯಿಂದ ಶಾಶ್ವತ ಪರಿಹಾರ ಹಾಗೂ ನಜೀರ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು. ಮೃತ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

