ಪ್ರಧಾನ ಸುದ್ದಿ

ಕರ್ನಾಟಕ ಫಲಿತಾಂಶ ಬಿಜೆಪಿಗೆ ಪಾಠ: ಆಡ್ವಾಣಿ

Published On :

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನಿಂದ ಅಚ್ಚರಿಯೇನೂ ಆಗಿಲ್ಲ. ಆದರೆ, ಭ್ರಷ್ಟಾಚಾರದ ವಿಷಯದಲ್ಲಿ ರಾಜಿ ಮಾಡಿಕೊಂಡರೆ ಅಂಥ ಪಕ್ಷಗಳನ್ನು ಜನ ತಿರಸ್ಕರಿಸುತ್ತಾರೆ ಎಂಬುದಕ್ಕೆ ಪುರಾವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ಎಚ್ಚರಿಕೆಯ ಗಂಟೆ ಎಂದು ಪಕ್ಷದ ಹಿರಿಯ ಮುಖಂಡ ಎಲ್.ಕೆ. ಆಡ್ವಾಣಿ ಅಭಿಪ್ರಾಯಪಟ್ಟಿದ್ದಾರೆ.
ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಸಮಯಸಾಧಕತನ ಅನುಸರಿಸಿದ್ದರಿಂದ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಈ ಸ್ಥಿತಿ ಬಂದಿತು. ಯಡಿಯೂರಪ್ಪರನ್ನು ಸಂತೈಸಲು ಅವರ ತಪ್ಪುಗಳನ್ನು ಕಡೆಗಣಿಸುವ ಪ್ರಯತ್ನಗಳು ನಡೆದವು. ಇಂಥ ವಿಚಾರಗಳಲ್ಲಿ ಪಕ್ಷವು ಕಠಿಣ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಏಕೈಕ ಸರ್ಕಾರವನ್ನು ಬಿಜೆಪಿ ಕಳೆದುಕೊಳ್ಳಬೇಕಾಯಿತು ಎಂದು ಆಡ್ವಾಣಿ ತಮ್ಮ ಬ್ಲಾಗ್‌ನಲ್ಲಿ ಹೇಳಿಕೊಂಡಿದ್ದಾರೆ. ಯಡಿಯೂರಪ್ಪ ಅವರನ್ನು ಪಕ್ಷ ಹೊರಗಟ್ಟಿದ್ದಲ್ಲ. ಬದಲಾಗಿ ಅವರೇ ಹೊಸ ಪಕ್ಷ ಕಟ್ಟಲು ಬಿಜೆಪಿಯಿಂದ ಹೊರ ನಡೆದರು ಎಂದೂ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ, ಕರ್ನಾಟಕದಲ್ಲಿನ ಬಿಜೆಪಿ ಸೋಲು ಕುರಿತು ಬೇಸರವಾಗಿದೆ. ಹಾಗಂತ ಈ ಫಲಿತಾಂಶದಿಂದ ಅಚ್ಚರಿ ಆಗಿಲ್ಲ. ಆದರೆ, ಪಕ್ಷವೇನಾದರೂ ಗೆಲವು ಸಾಧಿಸುತ್ತಿದ್ದರೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.