ಪ್ರಧಾನ ಸುದ್ದಿ

ನವಾಜ್ ಷರೀಫ್ 3ನೇ ಬಾರಿ ಪಾಕ್ ಪ್ರಧಾನಿ

Published On :

ಇಸ್ಲಾಮಾಬಾದ್/ಲಾಹೋರ್: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್ (ಪಿಎಂಎಲ್-ಎನ್) ಪಕ್ಷವು ಭರ್ಜರಿ ಜಯ ದಾಖಲಿಸಿದೆ. ಪಿಎಂಎಲ್ ನಾಯಕ ನವಾಜ್ ಷರೀಫ್ ಅವರು ಮೂರನೇ ಬಾರಿಗೆ ಪಾಕಿಸ್ತಾನದ ಪ್ರಧಾನಿ ಹುದ್ದೆಗೇರಲು ಸಿದ್ಧತೆ ನಡೆಸುತ್ತಿದ್ದಾರೆ. ಒಂದು ಕಾಲದಲ್ಲಿ ಪಾಕ್ ಸೇನೆಯಿಂದ ಬಂಧಿತರಾಗಿ, ಪ್ರಧಾನಿ ಪಟ್ಟ ಕಳೆದುಕೊಂಡು ಗಡಿಪಾರಾಗಿದ್ದ ಷರೀಫ್ ಅವರು ದೇಶದಲ್ಲಿ ಮತ್ತೆ ತಮ್ಮ ಹವಾ ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.
 ಶನಿವಾರ ನಡೆದ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, 272 ಕ್ಷೇತ್ರಗಳಲ್ಲಿ ಷರೀಫ್ ಅವರ ಪಿಎಂಎಲ್-ಎನ್ 128ರಲ್ಲಿ ಮುನ್ನಡೆ ಸಾಧಿಸಿದೆ. ಕ್ರಿಕೆಟಿಗ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರಿಕ್ ಇ-ಇನ್ಸಾಫ್ ಹಾಗೂ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ತೀವ್ರ ಮುಖಭಂಗ ಅನುಭವಿಸಿದ್ದು ಕ್ರಮವಾಗಿ 30 ಮತ್ತು 33 ಸೀಟುಗಳನ್ನು ಗಳಿಸುವ ಸಾಧ್ಯತೆಯಿದೆ.
 ಇದೇ ವೇಳೆ, ನವಾಜ್ ಷರೀಫ್ ಅವರು ಪಾಕ್ ಪ್ರಧಾನಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾದ ಹಿನ್ನೆಲೆಯಲ್ಲಿ ಅವರಿಗೆ ಪ್ರಧಾನಿ ಮನಮೋಹನ್‌ಸಿಂಗ್, ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಸೇರಿದಂತೆ ಅನೇಕ ಗಣ್ಯರು ಶುಭಕೋರಿದ್ದಾರೆ. ಜತೆಗೆ, ಪ್ರಧಾನಿ ಸಿಂಗ್ ಅವರು ಭಾರತಕ್ಕೆ ಬರುವಂತೆ ನವಾಜ್ ಅವರಿಗೆ ಆಹ್ವಾನವನ್ನೂ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.