ಎಪಿಎಲ್ ಕಾರ್ಡ್‌ಗೂ ಕಡಿಮೆ ದರದಲ್ಲಿ ಅಕ್ಕಿ
ಕನ್ನಡಪ್ರಭ ವಾರ್ತೆ , ಮೈಸೂರು , ಮೇ 21
ಬಿಪಿಎಲ್ ಕಾರ್ಡ್‌ದಾರರಿಗೆ 1ಗೆ ಪ್ರತಿ ಕೆ.ಜಿ. ಅಕ್ಕಿ ನೀಡುವುದಾಗಿ ಘೋಷಿಸಿದ್ದಾಯ್ತು, ಈಗ ಬಡತನ ರೇಖೆಗಿಂತ ಮೇಲಿರುವ (ಎಪಿಎಲ್) ಪಡಿತರದಾರರಿಗೆ ಪ್ರತಿ ಕೆ.ಜಿ.ಗೆ 8 ಅಥವಾ 9 ದರದಲ್ಲಿ ಅಕ್ಕಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಹೊಸ ಘೋಷಣೆ ಜೂ.1ರಿಂದಲೇ ಜಾರಿಗೆ ಬರಲಿದೆ ಎಂದೂ ಅವರು ತಿಳಿಸಿದ್ದಾರೆ.
ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಜವಾಹರಲಾಲ್ ನೆಹರು ಮತ್ತು ರಾಜೀವ್‌ಗಾಂಧಿ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಈ ವಿಚಾರ ತಿಳಿಸಿದ್ದಾರೆ.
ಬಡತನ ರೇಖೆಯಿಂದ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಕೆ.ಜಿ.ಗೆ 1 ರಂತೆ 30 ಕೆ.ಜಿ. ಅಕ್ಕಿ ನೀಡಲು ಈಗಾಗಲೇ ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಮಧ್ಯಮ ವರ್ಗದವರ ಪಾಲಿಗೆ ಅಕ್ಕಿ ಖರೀದಿ ದುಬಾರಿಯಾಗಿ ಪರಿಣಮಿಸಲಿದೆ. ಮಧ್ಯಮ ವರ್ಗದವರ ಮೇಲಾಗುವ ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಎಪಿಎಲ್ ಪಡಿತರದಾರರಿಗೆ 1 ಕೆ.ಜಿ.ಗೆ 8 ಅಥವಾ 9ಕ್ಕೆ ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಕೆ.ಜಿ.ಗೆ 1ರಂತೆ ಅಕ್ಕಿ ವಿತರಿಸುವುದಾಗಿ ಘೋಷಿಸಿದ್ದರು. ಈ ನಿಟ್ಟಿನಲ್ಲಿ ಕೇಂದ್ರ ಆಹಾರ ಸಚಿವ ಥಾಮಸ್‌ರನ್ನು ಭೇಟಿಯಾಗಿ ರಾಜ್ಯಕ್ಕೆ ಹೆಚ್ಚಿನ ಅಕ್ಕಿ ವಿತರಿಸುವಂತೆ ಮನವಿ ಮಾಡಿದ್ದರು.
ಅಕ್ಕಿ ಎಲ್ಲಿದೆ ಸಿದ್ದರಾಮಯ್ಯನವರೇ?
ಸಿಎಂ ಸಿದ್ದರಾಮಯ್ಯ ಅವರೇನೋ ಎಪಿಎಲ್ ಕಾರ್ಡ್‌ದಾರರಿಗೂ ಕಡಿಮೆ ದರದಲ್ಲಿ ಅಕ್ಕಿ ಪೂರೈಸುವುದಾಗಿ ಹೇಳಿದ್ದಾರೆ. ಆದರೆ, ಸದ್ಯ ರಾಜ್ಯದಲ್ಲಿ 37 ಲಕ್ಷ ಎಪಿಎಲ್ ಕಾರ್ಡ್‌ದಾರರಿದ್ದಾರೆ. ಇವರಿಗೆ ಪೂರೈಸುವಷ್ಟು ಅಕ್ಕಿ ಇದೆಯೇ?
-28 ಸಾವಿರ ಮೆಟ್ರಿಕ್ ಟನ್
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪೂರೈಕೆಯಾಗಬೇಕಾದ ಬಾಕಿ ಅಕ್ಕಿ
ರು. 1207.95 ಲಕ್ಷ
ರಾಜ್ಯ ಈ ಸಾಲಿನ ಆಯವ್ಯಯದಲ್ಲಿ ಆಹಾರ ಭದ್ರತೆ ಕಾಯಿದೆ ಅಡಿ ಅಕ್ಕಿಗಾಗಿ ನಿಗದಿ ಮಾಡಿದ ಹಣ.
ರು. 905.99 ಲಕ್ಷ
ಅಕ್ಕಿ ಖರ್ಚಿಗಾಗಿ ಆಯವ್ಯಯದಲ್ಲಿ ಉಳಿದಿರುವ ಹಣ
-87 ಲಕ್ಷ
ಇದು ರಾಜ್ಯದಲ್ಲಿ ಇರುವ ಬಿಪಿಎಲ್ ಕಾರ್ಡ್‌ದಾರರು
-11 ಲಕ್ಷ
ಅಂತ್ಯೋದಯ ಕಾರ್ಡ್‌ದಾರರು
-37ಲಕ್ಷ
ಎಪಿಎಲ್ ಕಾರ್ಡ್‌ದಾರರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

