ಪ್ರಧಾನ ಸುದ್ದಿ

ಕರ್ನಾಟಕದಲ್ಲಿ ಐಟಿ ಹೂಡಿಕೆ ತಾಣ ಸ್ಥಾಪನೆ ನಿರ್ಧಾರ ಮುಂದೂಡಿಕೆ

Published On :

ನವದೆಹಲಿ: ಐಟಿ ಸಿಟಿ ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಹೂಡಿಕೆ ತಾಣ ಸ್ಥಾಪನೆಗೆ ಸಂಬಂಧಿಸಿದ ಅಂತಿಮ ನಿರ್ಧಾರವನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಮುಂದೂಡಿದೆ.
ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಈ ವಿಚಾರ ಚರ್ಚಿಸಲಾಯಿತಾದರೂ ಅಂತಿಮ ನಿರ್ಧಾರವನ್ನು ಮುಂದೂಡಲು ತೀರ್ಮಾನಿಸಲಾಯಿತು. ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಈ ಪ್ರಸ್ತಾಪ ಮುಂಡೂಡಲಾಗಿದ್ದು, ಶೀಘ್ರದಲ್ಲೇ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಚಿದಂಬರಂ ಸಭೆ ಬಳಿಕ ಮಾಹಿತಿ ನೀಡಿದ್ದಾರೆ.
ಎಲೆಕ್ಟ್ರಾನಿಕ್ ಹಾರ್ಡ್‌ವೇರ್ ಉತ್ಪಾದನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಪ್ರಸ್ತಾಪಿಸಲಾಗಿತ್ತು. ಈ ಮಹತ್ವಾಕಾಂಕ್ಷಿ ಯೋಜನೆಗೆ ಕರ್ನಾಟಕ ಸರ್ಕಾರ ಭೂಮಿ ನೀಡಲಿದ್ದು, ಈ ಪ್ರದೇಶವು ರಾಷ್ಟ್ರೀಯ ಮತ್ತು ರಾಜ್ಯಹೆದ್ದಾರಿಗಳೊಂದಿಗೆ ನೇರ ಸಂಪರ್ಕ ಹೊಂದಿರಲಿದೆ. ಈ ಯೋಜನೆ ಮೂಲಕ 1.6 ಲಕ್ಷ ಕೋಟಿ ಹೂಡಿಕೆ ಆಕರ್ಷಿಸುವ ಉದ್ದೇಶ ಸರ್ಕಾರಕ್ಕಿದೆ. 40 ದಶಲಕ್ಷ ನೇರ ಹಾಗೂ 1.2 ದಶಲಕ್ಷ ಪರೋಕ್ಷ ಉದ್ಯೋಗ ಸೃಷ್ಟಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು 2008ರಲ್ಲಿ ಪ್ರಸ್ತಾಪಿಸಿದ ಈ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಕೈಗೆತ್ತಿಕೊಳ್ಳಲಿವೆ.

ಕ್ಯಾಬಿನೆಟ್ ಸಭೆ ಮುಖ್ಯಾಂಶಗಳು
-  ಆದಾಯ ತೆರಿಗೆ ಇಲಾಖೆ ಪುನರ್ ರಚನೆ ಬದಲಾವಣೆಗೆ ಒಪ್ಪಿಗೆ. ಹೆಚ್ಚುವರಿ 20,751 ಹುದ್ದೆಗಳ ಸೃಷ್ಟಿ.
-  ವಾರ್ಷಿಕ ಹೆಚ್ಚುವರಿ 25 ಸಾವಿರ ಆದಾಯ ಸೃಷ್ಟಿಗೆ ಐಟಿ ಇಲಾಖೆ ನೆರವು.
-  ಬಂದರು ಮೂಲಸೌಕರ್ಯ ಯೋಜನೆಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು 12 ವಾರಗಳೊಳಗೆ ಪೂರ್ಣಗೊಳಿಸುವಂತೆ ಭದ್ರತಾ ಏಜೆನ್ಸಿಗಳಿಗೆ ಸೂಚನೆ.
-  ರಸ್ತೆ ನಿರ್ಮಾಣ ಯೋಜನೆಗಳಿಗೆ ಇದ್ದಂಥ ಅನೇಕ ಅಡೆತಡೆಗಳನ್ನು ನಿವಾರಿಸಲಾಗಿದೆ. ಬಾಕಿ ಉಳಿದಿರುವ ವಿಚಾರಗಳ ಕುರಿತು ಚರ್ಚಿಸಲು ಡಾ. ಕಸ್ತೂರಿರಂಗನ್ ನೇತೃತ್ವದ ಸಮಿತಿಯೊಂದನ್ನು ರಚಿಸಲಾಗಿದೆ.
-  ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗುತ್ತಿದ್ದ ಅರಣ್ಯ ಮಂಜೂರಾತಿಯಿಂದ ಪರಿಸರ ಮಂಜೂರಾತಿಯನ್ನು ಬೇಸರ್ಪಡಿಸುವುದು.
-  ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಅದರಲ್ಲೂ ಮುಖ್ಯವಾಗಿ ರಕ್ಷಿತಾರಣ್ಯ ಭೂಮಿಯನ್ನು ತಪ್ಪಿಸಿಕೊಂಡು ನಿರ್ಮಾಣವಾಗುವ ರಸ್ತೆಗೆ ಶೀಘ್ರ ನಿರಾಪೇಕ್ಷಣ ಪತ್ರ ನೀಡಲು ಒಪ್ಪಿಗೆ.
-  ಒಬಿಸಿ, ಎಸ್ಸಿ, ಎಸ್ಟಿ ವರ್ಗಗಳಿಗೆ ಮೀಸಲಾಗಿರುವ ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ವಿಶೇಷ ನೇಮಕಾತಿ ಯೋಜನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.