ಪರಿಷತ್ನ ಒಬ್ಬರಿಗೆ ಸಚಿವ ಸ್ಥಾನ ಪಕ್ಕಾ
ನವದೆಹಲಿ: ಅವಕಾಶ ವಂಚಿತ ವಿಧಾನ ಪರಿಷತ್ ಸದಸ್ಯರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಷತ್ನಿಂದ ಒಬ್ಬ ಸದಸ್ಯರಿಗೆ ಸಂಪುಟದಲ್ಲಿ ಸ್ಥಾನ ನೀಡಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಅನುಮೋದನೆ ಪಡೆದಿದ್ದಾರೆ.
ಗುರುವಾರ ಸೋನಿಯಾ ಅವರನ್ನು ಭೇಟಿ ಮಾಡಿ ಸುಮಾರು 15 ನಿಮಿಷ ಚರ್ಚಿಸಿದ ಸಿದ್ದರಾಮಯ್ಯ ಅವರು, ಸಂಪುಟದಲ್ಲಿ ಪರಿಷತ್ ಸದಸ್ಯರಿಗೆ ಸ್ಥಾನ ನೀಡುವ ಕುರಿತು ಮಾತುಕತೆ ನಡೆಸಿ ಒಬ್ಬ ಸದಸ್ಯರಿಗೆ ಸ್ಥಾನ ನೀಡಲು ಅನುಮತಿ ಪಡೆದರು.
ಭೇಟಿ ವೇಳೆ ವಿಧಾನಸಭಾಧ್ಯಕ್ಷರು ಮತ್ತು ಉಪಸಭಾಧ್ಯಕ್ಷರ ಆಯ್ಕೆ ಕುರಿತೂ ಮಾತುಕತೆ ನಡೆಸಿದರು.
ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಪರಿಷತ್ನ ಒಬ್ಬ ಸದಸ್ಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸೋನಿಯಾ ಗಾಂಧಿ ಅನುಮತಿ ನೀಡಿದ್ದಾರೆ' ಎಂದು ತಿಳಿಸಿದರು.
ಉಳಿದ ನಾಲ್ಕು ಸ್ಥಾನಗಳ ಭರ್ತಿ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದರು. ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಂಬರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲಾಯಿತೆಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

