ಶ್ರೀನಿಗೆ ಗೇಟ್‌ಪಾಸ್?

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ರಾಜಿನಾಮೆ ನೀಡಲ್ಲ ಎಂದು ಎನ್. ಶ್ರೀನಿವಾಸನ್ ಪಟ್ಟು ಹಿಡಿದಿದ್ದಾರೆ.
Updated on: 

ನವದೆಹಲಿ/ಮುಂಬೈ: ಸ್ಪಾಟ್ ಫಿಕ್ಸಿಂಗ್ ಹಗರಣ ಸಂಬಂಧ  ಅಳಿಯ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಗುರುನಾಥ್ ಮೇಯಪ್ಪನ್ ಬಂಧನವಾಗಿದ್ದರೂ ಸಹ, ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ರಾಜಿನಾಮೆ ನೀಡಲ್ಲ ಎಂದು ಎನ್. ಶ್ರೀನಿವಾಸನ್ ಪಟ್ಟು ಹಿಡಿದಿದ್ದಾರೆ.
ಶುಕ್ರವಾರ ತಡರಾತ್ರಿಯೇ ಮುಂಬೈ ಅಪರಾಧ ವಿಭಾಗದ ಪೊಲೀಸರು ಗುರುನಾಥ್‌ರನ್ನು ಬಂಧಿಸಿದ್ದರು. ಶನಿವಾರ ಅವರನ್ನು ಕೋರ್ಟ್ ಮುಂದೆ ಹಾಜರು ಪಡಿಸಿ, 29ರ ವರೆಗೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇಷ್ಟೆಲ್ಲಾ ಘಟನೆಗಳಾಗಿದ್ದರೂ ಸಹ, ಶ್ರೀನಿವಾಸನ್ ಇನ್ನೂ ತಮ್ಮ ಪಟ್ಟು ಸಡಿಲಿಸಿಲ್ಲ. ತಾವು ಯಾವುದೇ ತಪ್ಪು ಮಾಡಿಲ್ಲ, ನಾನೇಕೆ ರಾಜಿನಾಮೆ ಕೊಡಬೇಕು ಎಂದು ಶ್ರೀನಿವಾಸನ್ ಪ್ರಶ್ನಿಸಿದ್ದಾರೆ. ಗುರುನಾಥ್ ತಪ್ಪು ಮಾಡಿರುವುದು ಕಂಡು ಬಂದಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಖಂಡಿತ ಎಂದು ಅವರು ಹೇಳಿದ್ದಾರೆ.
ಬಿಸಿಸಿಐನ ಹಲವಾರು ಪದಾಧಿಕಾರಿಗಳು ಶ್ರೀನಿವಾಸನ್ ಮುಂದುವರಿಕೆಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಈ ಕೂಡಲೇ ಅವರು ರಾಜಿನಾಮೆ ನೀಡಬೇಕು, ಇಲ್ಲದಿದ್ದರೆ ಮಹಾಭಿಯೋಗದ ಮೂಲಕ ಅವರನ್ನು ಕೆಳಗಿಳಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಫೈನಲ್ ಪಂದ್ಯ ಅಭಾದಿತ

ಭಾನುವಾರ ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಫೈನಲ್ ಪಂದ್ಯ ನಡೆಯುವುದು ಖಚಿತ ಎಂದು ಐಪಿಎಲ್ ಹೇಳಿದೆ. ಈ ಪಂದ್ಯಕ್ಕೆ ಯಾವುದೇ ಅಡ್ಡಿ ಇಲ್ಲ. ಸದ್ಯಕ್ಕೆ ಸಿಎಸ್‌ಕೆ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com