ಸ್ಪಾಟ್ ಫಿಕ್ಸಿಂಗ್: ನ್ಯಾಯಾಂಗ ವಶಕ್ಕೆ ಶ್ರೀಶಾಂತ್
ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರಿಂದ ಬಂಧಿತರಾಗಿದ್ದ ಎಸ್.ಶ್ರೀಶಾಂತ್, ಅಜಿತ್ ಚಾಂಡಿಲಾ ಹಾಗೂ 2 ಬುಕ್ಕಿಗಳನ್ನು ನ್ಯಾಯಾಂಗದ ವಶಕ್ಕೆ ನೀಡುವಂತೆ ದೆಹಲಿ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ.
ತನಿಖಾಧಿಕಾರಿಗಳು ತನಿಖೆಯ ಉದ್ದೇಶದಿಂದ ಇನ್ನು 2 ದಿನಗಳವರೆಗೆ ಇವರನ್ನು ವಶಕ್ಕೆ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಾಲಯ ಇವರನ್ನು ನ್ಯಾಯಾಂಗ ವಶಕ್ಕೆ ನೀಡಿತು.
ಶ್ರೀಶಾಂತ್ ಅವರನ್‌ನು ಇನ್ನಷ್ಟು ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಕಲೆಹಾಕಬೇಕು ಹಾಗಾಗಿ ಶ್‌ರೀಶಾಂತ್ ಅವರನ್ನು ಇನ್ನು 2 ದಿನಗಳ ವರೆಗೆ ಪೊಲೀಸ್ ವಶಕ್ಕೆ ನೀಡಬೇಕೆಂದು ಪೊಲೀಸರು ಮನವಿ ಸಲ್ಲಿಸಿದ್ದರು. ಆದರೆ ಇಷ್ಟು ದಿನಗಳ ತನಿಖೆ ನಂತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡುವುದು ಒಳಿತು ಎಂದು ಮುಖ್ಯ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಲೊಕೇಶ್ ಕುಮಾರ್ ಶರ್ಮಾ ಈ ಮನವಿಯನ್ನು ತಿರಸ್ಕರಿಸಿದರು.
ಇಷ್ಟು ದಿನಗಳವರೆಗೆ ಶ್ರೀಶಾಂತ್ ಅವರನ್ನು ಪೊಲೀಸ್ ವಶಕ್ಕೆ ನೀಡಲಾಗಿತ್ತು. ಆರೋಪಿಗೆ ನ್ಯಾಯ ಒದಗಿಸಿಕೊಡುವ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ತಿಳಿಸಿತು.
ಇದೇ ವೇಳೆ ಅಂಕಿತ್ ಚೌವಾಣ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಶ್ರೀಶಾಂತ್ ಜಾಮೀನು ಅರ್ಜಿ ವಿಚಾರಣೆಯನ್ನು ಜೂನ್ 4ಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ದಾವೂದ್ ಲಿಂಕ್: ನ್ಯಾಯಾಲಯದ ವಿಚಾರಣೆ ವೇಳೆ ಪ್‌ರಕರಣದಲ್ಲಿ ದಾವೂದ್ ಕೈವಾಡದ ಬಗ್ಗೆ ವಿಷಯ ಪ್ರಸ್ತಾಪ ಮಾಡಿದ ಹಿರಿಯ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀವ್ ಮೋಹನ್, ಹಲವಾರು ದೂರವಾಣಿ ಕರೆಗಳನ್ನು ವಿಷ್ಲೇಶಣೆ ನಡೆಸಿದ ನಂತರ ಪ್ರಕರಣದಲ್ಲಿ ಹಲವಾರು ಖ್ಯಾತ ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಮಾಹಿತಿ ಬಂದಿದೆ. ಈ ವ್ಯಕ್ತಿಗಳು ಹಲವಾರುಬಾರಿ ಭೂಗತ ಪಾತಕಿ ದಾವುದ್ ಇಬ್ರಾಹಿಂಗೆ ಕರೆ ಮಾಡಿರುವುದು ಕಂಡು ಬಂದಿದೆ ಎಂದು ವಿವರಿಸಿದರು. ಈ ಕುರಿತು ಕೆಲವು ಅಂಶಗಳು ಕೈತಪ್ಪಿದ್ದು, ಈ ಅಂಶಗಳನ್ನು ಪಡೆಯಲು ಪ್ರಯತ್ನಿಸುತ್ತಿರುವಾಗಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ಅತಿಶೀಘ್ರದಲ್ಲಿ ಬೆಳಕಿಗೆ ಬರಲಿದ್ದು, ಇದಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿಗಳು ಇನ್ನು ಸಗಬೇಕಾಗಿದ್ದು ಅದನ್ನು ಕಲೆಹಾಕಲು ಪ್ರಯತ್ನಿಸಲಾಗುತ್ತಿದೆ. ಈ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಗಳು ಭಾಗಿಯಾಗಿದ್ದು, ಅವರು ದಾವುದ್ ಜತೆಗೆ ಸತತ ಸಂಪರ್ಕದಲ್ಲಿದ್ದರು. ಈ ಸಂದರ್ಭದಲ್ಲಿ ಅವರ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

