ಪ್ರಧಾನ ಸುದ್ದಿ

ಶಾದಿಭಾಗ್ಯ ಹೋರಾಟ ಅಹೋರಾತ್ರಿ: ಬಿಎಸ್‌ವೈ

ಶಾದಿಭಾಗ್ಯ ಹೋರಾಟ ಅಹೋರಾತ್ರಿ: ಬಿಎಸ್‌ವೈ
Published On :

ಕನ್ನಡಪ್ರಭ ವಾರ್ತೆ, ಬೆಂಗಳೂರು, ನ.4-
ಶಾದಿಭಾಗ್ಯ ಯೋಜನೆಯನ್ನು ಎಲ್ಲಾ ವರ್ಗದ ಬಡ ಹೆಣ್ಣು ಮಕ್ಕಳಿಗೂ ವಿಸ್ತರಿಸಬೇಕು ಮತ್ತು ಎಪಿಎಲ್ ಕಾರ್ಡ್‌ದಾರರಿಗೂ ಪಡಿತರ ವಿತರಿಸಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಆಹೋರಾತ್ರಿ ಧರಣಿಯನ್ನು ಬೇಡಿಕೆ ಈಡೇರಿಸುವವರೆಗೂ ಮುಂದುವರಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಈ ಎರಡು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅ. 31ರಿಂದ ಆರಂಭಿಸಿರುವ ಹೋರಾಟಕ್ಕೆ ಸರ್ಕಾರದ ಕಡೆಯಿಂದ ಯಾವುದೇ ಸ್ಪಂದನೆ ಸಿಗದಿರುವುದು ಮತ್ತು ಹೋರಾಟದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಲಘುವಾಗಿ ಮಾತನಾಡಿರುವುದರಿಂದ ವ್ಯಘ್ರರಾಗಿರುವ ಯಡಿಯೂರಪ್ಪ ಅವರು ಈ ತೀರ್ಮಾನಕ್ಕೆ ಬಂದಿದ್ದಾರೆ.
ನ. 23ರವರೆಗೆ ಆನಂದರಾವ್ ವೃತ್ತದ ಗಾಂಧಿಪ್ರತಿಮೆ ಎದುರು ಧರಣಿ ನಡೆಸಲಾಗುವುದು. ನ. 24ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ನ. 25ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲೂ ಶಾಂತಿಯುತ ಧರಣಿ ಮುಂದುವರಿಸಲಾಗುವುದು. ಇಷ್ಟಾದರೂ ಸರ್ಕಾರ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ, ಈ ಎರಡೂ ಬೇಡಿಕೆಗಳ ಬಗ್ಗೆ ಸರ್ಕಾರಿ ಆದೇಶ ಹೊರಡಿಸುವವರೆಗೆ ಧರಣಿ ಮುಂದುವರಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.
ಇದಕ್ಕಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಧಾನಸೌಧ ಚಲೋ, ತುಮಕೂರುವರೆಗೆ ಪಾದಯಾತ್ರೆ ಮತ್ತು ರಾಜ್ಯವ್ಯಾಪಿ ಆಂದೋಲನ ಹಮ್ಮಿಕೊಳ್ಳುವ ಕಾರ್ಯಕ್ರಮವನ್ನು ಅವರು ಕೈಬಿಟ್ಟಿದ್ದಾರೆ. ಧರಣಿ ಸ್ಥಳದಲ್ಲಿ ಸುದ್ದಿಗಾರರಿಗೆ ಅವರು ಸೋಮವಾರ ವಿಷಯ ತಿಳಿಸಿದರು.

ಸಿಎಂ ಹುದ್ದೆಯಲ್ಲಿ ಹೇಗಿರುತ್ತಾರೆ?
ಪ್ರಸಕ್ತ ಆರ್ಥಿಕ ವರ್ಷದಿಂದ ಶಾದಿಭಾಗ್ಯ ಯೋಜನೆಯನ್ನು ಎಲ್ಲಾ ವರ್ಗಗಳಿಗೂ ವಿಸ್ತರಿಸಲು ಸಾಧ್ಯವಿಲ್ಲ. ಹಂತಹಂತವಾಗಿ ಇದನ್ನು ವಿಸ್ತರಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿ ಕಾರಿದ ಯಡಿಯೂರಪ್ಪ, ಇದು ಭಂಡತನದ ಮಾತು. ಒಂದು ಯೋಜನೆ ಜಾರಿಗೊಳಿಸಲು ಸಾಧ್ಯವಿಲ್ಲ ಎನ್ನುವವರು ಮುಖ್ಯಮಂತ್ರಿ ಹುದ್ದೆಯಲ್ಲಿ ಹೇಗಿರುತ್ತಾರೆ ಎಂದು ಯಡಿಯೂರಪ್ಪ ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.