ಪ್ರಧಾನ ಸುದ್ದಿ

ಶಾದಿಭಾಗ್ಯಕ್ಕೆ ಇನ್ನು ತಾಲೂಕು, ಜಿಲ್ಲಾ ಸಮರ

Published On :

ಕನ್ನಡಪ್ರಭ ವಾರ್ತೆ  ಬೆಂಗಳೂರು  ನ.5
ಶಾದಿಭಾಗ್ಯ ಯೋಜನೆಯನ್ನು ಎಲ್ಲ ವರ್ಗದ ಬಡ ಹೆಣ್ಣು ಮಕ್ಕಳಿಗೂ ವಿಸ್ತರಿಸಬೇಕು ಮತ್ತು ಎಪಿಎಲ್ ಕಾರ್ಡ್‌ದಾರರಿಗೂ ಪಡಿತರ ವಿತರಿಸಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಹೋರಾಟ ತೀವ್ರಗೊಳಿಸಲು ಕೆಜೆಪಿ ತೀರ್ಮಾನಿಸಿದೆ.
ಪಕ್ಷದ ಅಧ್ಯಕ್ಷ ಯಡಿಯೂರಪ್ಪ  ಬೆಂಗಳೂರಿನಲ್ಲಿ ನಡೆಸುತ್ತಿರುವ ಆಹೋರಾತ್ರಿ ಧರಣಿ ಬೆಂಬಲಿಸಿ ಮತ್ತು ಬೇಡಿಕೆಗಳನ್ನು ಪರಿಗಣಿಸದ ಸರ್ಕಾರದ ವಿರುದ್ಧ ನ. 11ರಂದು ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಮಂಗಳವಾರ ನಡೆದ ಕೆಜೆಪಿ  ಕಾರ್ಯಕಾರಿಣಿಯಲ್ಲಿ ನಿರ್ಧರಿಸಲಾಗಿದೆ.
ಯಡಿಯೂರಪ್ಪ ಅವರು ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಅ. 31ರಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದು, ಮಂಗಳವಾರ ಧರಣಿ ನಡುವೆಯೇ ಕೆಜೆಪಿ ಕಾರ್ಯಕಾರಿಣಿ ನಡೆಸಿ ಹೋರಾಟವನ್ನು ತೀವ್ರಗೊಳಿಸುವ ನಿರ್ಣಯ ಕೈಗೊಳ್ಳಲಾಯಿತು.
ಒಂದು ವರ್ಗಕ್ಕೆ ಮಾತ್ರ ಯೋಜನೆ ನೀಡಿ ಸಮಾಜವನ್ನು ಒಡೆಯುವ ಕಾರ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ನ. 11ರಂದು ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಕೆಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಎಲ್ಲಾ ವರ್ಗವನ್ನೂ ಸಮನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.
 ಯಡಿಯೂರಪ್ಪ ಈಗಾಗಲೇ ಹೇಳಿರುವಂತೆ ನ. 23ರವರೆಗೆ ಬೆಂಗಳೂರಿನಲ್ಲಿ ಆಹೋರಾತ್ರಿ ಧರಣಿ ಮುಂದುವರಿಸಬೇಕು. ಈ ಧರಣಿಯಲ್ಲಿ ಪ್ರತಿನಿತ್ಯ ಒಂದು ಜಿಲ್ಲೆಯಿಂದ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಳ್ಳಬೇಕು. ನ. 24ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದು, ನ. 25ರಿಂದ ಅಧಿವೇಶನದಲ್ಲಿ ಧರಣಿ ಮುಂದುವರಿಸುವ ನಿರ್ಣಯವನ್ನು ಕಾರ್ಯಕಾರಿಣಿ ಅನುಮೋದಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.