ಸೌಜನ್ಯಾ ಹತ್ಯಾಚಾರ ಸಿಬಿಐಗೆ
ಕನ್ನಡಪ್ರಭ ವಾರ್ತೆ ದಾವಣಗೆರೆ ನ.6-
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ನಗರದಲ್ಲಿ ಬುಧವಾರ ಮಾತನಾಡಿದ ಅವರು, 'ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಸಮಗ್ರ ತನಿಖೆಯನ್ನು ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೂ ಸತ್ಯವು ಜನರಿಗೆ ಮನವರಿಕೆಯಾಗಲು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಮಂಗಳವಾರ ಸಂಜೆ ಸಿಎಂ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ' ಎಂದರು.
ಈ ಪ್ರಕರಣದ ಆರೋಪಿ ಸಂತೋಷ ರಾವ್ ಎಂಬುದಾಗಿ ವರದಿಯಲ್ಲೂ ಸ್ಪಷ್ಟವಾಗಿ ಸಾಕ್ಷ್ಯಾದಾರ ಸಮೇತ ದಾಖಲಿಸಲಾಗಿದೆ. ಆದರೂ ಸೌಜನ್ಯಾಳ ಪಾಲಕರು, ಸಂಘಟನೆಗಳು ಮತ್ತು ಬೆಳ್ತಂಗಡಿ ಶಾಸಕ ವಸಂತ ಬಂಗೇರ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪತ್ರ ಬರೆದು, ಒತ್ತಾಯಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗುತ್ತಿದೆ ಎಂದರು.
ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಇದರಿಂದ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ. ಯುವತಿಯ ಕುಟುಂಬಕ್ಕೆ ನ್ಯಾಯ ಸಿಗುವಂತಾಗಬೇಕು.
- ಡಾ. ಡಿ.ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದ ಧರ್ಮಾಧಿಕಾರಿ
ಸಿಐಡಿಯಂತೆ ಸಿಬಿಐ ಪ್ರಕರಣದ ತನಿಖೆ ನಡೆಸದಿರಲಿ. ಹೀಗಾಗಿ ಸುಪ್ರೀಂಕೋರ್ಟ್ ಮಾರ್ಗದರ್ಶನದಲ್ಲಿ ತನಿಖೆ ನಡೆಯಬೇಕು. ಆಗ ಮಾತ್ರ ಸತ್ಯ ಹೊರಬೀಳುತ್ತದೆ.
ನಮ್ಮ ಹೋರಾಟ ಇರುವುದು ನ್ಯಾಯಕ್ಕಾಗಿ.
-ಚಂದಪ್ಪ ಗೌಡ, ಸೌಜನ್ಯಾ ತಂದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

