ಕಪ್ಪತ್ತಗುಡ್ಡ ಸಂರಕ್ಷಣೆ ಕುರಿತು ಸದನದಲ್ಲಿ ಚರ್ಚಿಸುವೆ: ಹೊರಟ್ಟಿ
ಮುಂಡರಗಿ: ಉತ್ತರ ಕರ್ನಾಟಕದ ಸಹ್ಯಾದ್ರಿಯಂತಿರುವ ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿದ್ದು, ಈ ಕುರಿತು ಸದನದಲ್ಲಿಯೇ ಪ್ರಶ್ನಿಸುವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಅವರು ಶನಿವಾರ ಮುಂಡರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಪ್ಪತ್ತಗುಡ್ಡದ ಅನೇಕ ಕಡೆಗಳಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ಇಲ್ಲಿ ಸಿಗುವ ಖನಿಜ ಸಂಪತ್ತಿಗೆ ಆಪತ್ತು ಬರುತ್ತದೆ. ಗಣಿಗಾರಿಕೆಯಿಂದ ಇಲ್ಲಿನ ಅರಣ್ಯ ಸಂಪತ್ತು ಹಾಳಾಗುವುದಲ್ಲದೆ ಪ್ರಾಣಿ ಸಂಪತ್ತಿಗೆ ಕುತ್ತು ಬರುತ್ತದೆ. ಜಿಲ್ಲೆಯ ಗದಗ, ಮುಂಡರಗಿ ಮತ್ತು ಶಿರಹಟ್ಟಿ ತಾಲೂಕುಗಳಲ್ಲಿ ಹಬ್ಬಿಕೊಂಡಿರುವ ಔಷಧಿ ಸಸ್ಯಗಳಿಗೆ ಹೆಸರುವಾಸಿಯಾಗಿರುವ ಕಪ್ಪತ್ತಗುಡ್ಡವನ್ನು ಸರ್ಕಾರ ಕಾಳಜಿ ವಹಿಸಿ ಸಂರಕ್ಷಿಸಬೇಕು ಎಂದರು.
ಕಾಂಗ್ರೆಸ್ ಬಳ್ಳಾರಿಯ ಗಣಿಗಾರಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಳೆದ ವರ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಾದಯಾತ್ರೆ ಕೈಗೊಂಡಿತ್ತು. ಆದರೆ, ಈಗ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದರೂ ನಮ್ಮ ಪ್ರಾಕೃತಿಕ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಕಠಿಣ ಕ್ರಮ ತೆಗೆದುಕೊಳ್ಳದೇ ಇರುವುದು ವಿಷಾದದ ಸಂಗತಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

