ಪ್ರಧಾನ ಸುದ್ದಿ

ಬೆಂಬಲಕ್ಕಿಂತ ಆರಂಭ ಮುಖ್ಯ

Published On :

ಬೆಂಗಳೂರು: ಕಬ್ಬಿಗೆ ಹೆಚ್ಚಿನ ಬೆಂಬಲ ಬೆಲೆ ನೀಡುವುದಕ್ಕಿಂತ ಮುಖ್ಯವಾಗಿ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುವುದು ಅತ್ಯಂತ ಮುಖ್ಯ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗದಿದ್ದರೆ ರೈತರಿಗೆ ಸಂಪೂರ್ಣ ನಷ್ಟವಾಗುತ್ತದೆ. ಕಾರ್ಖಾನೆಗಳು ಸರ್ಕಾರ ನಿಗದಿ ಪಡಿಸಿದ 2500 ದರ ನೀಡಲು ಹಿಂದೇಟು ಹಾಕುತ್ತಿವೆ. ಕಾರಣ, ಅವರಿಗೂ ನಷ್ಟವಾಗುತ್ತಿದೆ. ಸಕ್ಕರೆ ಬೆಲೆ ಕುಸಿದಿದೆ. ಈ ಸಂದರ್ಭದಲ್ಲಿ ಕಾರ್ಖಾನೆಗಳು ಪ್ರಾರಂಭವಾಗಿ ಕೆಲಸ ಆರಂಭಿಸುವುದು ಒಳಿತು ಎಂದರು. ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಭಾಗವಹಿಸಿದ್ದ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಸ್.ಆರ್. ಪಾಟೀಲ್, ಸಕ್ಕರೆ ಕಾರ್ಖಾನೆಗಳು ಬೆಂಬಲ ಬೆಲೆ ನೀಡದಿರುವ ಬಗ್ಗೆ ಮಾತುಕತೆ ನಡೆಸಲಾಗುತ್ತದೆ. ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದರು.

90 ಲಕ್ಷ ಟನ್ ಸಕ್ಕರೆ ದಾಸ್ತಾನು: ದೇಶದಲ್ಲಿ ಸಕ್ಕರೆ ಉತ್ಪಾದನೆ ಬೇಡಿಕೆಗಿಂತ ಹೆಚ್ಚಿದೆ. ದೇಶದಲ್ಲಿ 240 ಲಕ್ಷ ಟನ್ ಸಕ್ಕರೆ ಬೇಡಿಕೆ ಇದೆ. ಉತ್ಪಾದನೆ 260 ಲಕ್ಷ ಟನ್ ಆಗಿದೆ. ರಾಜ್ಯದಲ್ಲಿ 90 ಲಕ್ಷ ಟನ್ ಸಕ್ಕರೆ ದಾಸ್ತಾನಿನಲ್ಲಿದೆ. ಹೆಚ್ಚಿನ ಸಕ್ಕರೆ ಉತ್ಪಾದನೆಯಾದರೆ ಎಲ್ಲಿ ಮಾರಾಟವಾಗುತ್ತದೆ. ಪ್ರತಿ ಟನ್‌ಗೆ 3400 ಇದ್ದ ಸಕ್ಕರೆ ಬೆಲೆ 2600ಕ್ಕೆ ಇಳಿದಿದೆ. ಹೀಗಾಗಿ ಸಕ್ಕರೆ ಕಾರ್ಖಾನೆಗಳು ಹೇಗೆ ನಡೆಯಬೇಕು ಎಂದರು.

ನಮ್ಮ ಪಾತ್ರ ಇಲ್ಲ: ಕಬ್ಬು ಖರೀದಿ ವ್ಯಾಪ್ತಿಯನ್ನು ತಮ್ಮ ಸಕ್ಕರೆ ಕಾರ್ಖಾನೆಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ನಿಮ್ಮ ಪ್ರಭಾವ ಇದೆಯೇ ಎಂಬ ಪ್ರಶ್ನೆಗೆ, 'ಸಕ್ಕರೆ ಕಾರ್ಖಾನೆಯಲ್ಲಿ ನಮ್ಮ ಯಾವುದೇ ಪಾತ್ರ ಇಲ್ಲ' ಎಂದು ತೋಟಗಾರಿಕೆ ಇಲಾಖೆ ಸಚಿವ ಶಾಮನೂರು ಶಿವಶಂಕರಪ್ಪ ಉತ್ತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.