ಇದು ಬೆಂಗಳೂರು 'ಕನ್ನ'ಡ
ಬೆಂಗಳೂರು: ಬಹುಭಾಷಿಕರ ನಗರವಾದ ಬೆಂಗಳೂರು ನಗರದಲ್ಲೇ ಅತಿ ಹೆಚ್ಚು ಅಂಗ್ಲ ಮತ್ತು ಕನ್ನಡ ಶಾಲೆಗಳಿವೆ. ಕನ್ನಡ ಭಾಷೆಯಲ್ಲಿ ಓದುವ ವಿದ್ಯಾರ್ಥಿಗಳಿಗಿಂತ ಆಂಗ್ಲ ಭಾಷೆಯಲ್ಲಿ ಓದುವ ವಿದ್ಯಾರ್ಥಿಗಳ ಸಂಖ್ಯೆಯೇ ದುಪ್ಪಟ್ಟಿದೆ!.
ಇನ್ನು ಗ್ರಾಮಾಂತರ ಪ್ರದೇಶದಲ್ಲಿ ನಗರ ಪ್ರದೇಶದ ತದ್ವಿರುದ್ಧ. ಬೆಂಗಳೂರು ಗ್ರಾಮಾಂತರದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೆಂಗಳೂರು ನಗರ ಪ್ರದೇಶದಲ್ಲಿ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅನುದಾನಿತ, ಅನುದಾನ ರಹಿತ, ಕೇಂದ್ರೀಯ ಸೇರಿದಂತೆ ಒಟ್ಟಾರೆ 19,322 ಶಾಲೆಗಳಿವೆ. ಗ್ರಾಮೀಣ ಪ್ರದೇಶದಲ್ಲಿ 54,898 ಶಾಲೆಗಳಿವೆ. ರಾಜ್ಯದ ಎಲ್ಲಾ ಹಂತದ ಒಟ್ಟು ಶಾಲೆಗಳಲ್ಲಿ ಗ್ರಾಮಾಂತರ ಶಾಲೆಗಳ ಪ್ರಮಾಣ ಶೇ.73.96ರಷ್ಟಿದ್ದರೆ, ನಗರ ಪ್ರದೇಶದಲ್ಲಿರುವ ಶಾಲೆಗಳ ಪ್ರಮಾಣ ಶೇ.26.04ರಷ್ಟಿದೆ.
ಇದರಿಂದ ಪ್ರತಿ ವರ್ಷ ಶಾಲೆಗಳ ಪ್ರಮಾಣದಲ್ಲಿ ಶೇ.0.78ರಷ್ಟು ಹೆಚ್ಚಳ ಕಂಡುಬರುತ್ತಿದೆ. ಬಹುಭಾಷಿಗರ ನಗರ ಬೆಂಗಳೂರಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಅಧರಿಸಿದರೆ, ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರಥಮ ಆದ್ಯತೆ ನೀಡಿದರೆ, ನಂತರದಲ್ಲಿ ಕನ್ನಡ ಮತ್ತು ಉರ್ದು, ತೆಲುಗು, ತಮಿಳಿನಲ್ಲಿ ವ್ಯಾಸಂಗ ಮಾಡಲು ಹೆಚ್ಚು ಆಸಕ್ತಿ ಹೊಂದಿದ್ದಾರೆ.
ಗ್ರಾಮಾಂತರವೇ ವಾಸಿ
ಬೆಂಗಳೂರು ನಗರದಲ್ಲಿ 13,084 ಶಾಲೆಗಳಿದ್ದು, 13,98,284 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬೆಂಗಳೂರು ಗ್ರಾಮೀಣ ಪ್ರದೇಶದಲ್ಲಿ 3,094 ಶಾಲೆಗಳಿದ್ದು, 1,43,450 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಕನ್ನಡ ಮಾಧ್ಯಮದಲ್ಲಿ 1,08,398 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರೆ, ನಗರದ ಪ್ರದೇಶದಲ್ಲಿ 4,88,597 ವಿದ್ಯಾರ್ಥಿಗಳು ಕನ್ನಡದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆಂಗ್ಲಭಾಷೆಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ 30,745 ವಿದ್ಯಾರ್ಥಿಗಳು ಮತ್ತು ನಗರದಲ್ಲಿ 8,66,463 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಉಳಿದಂತೆ ಸಾಕಷ್ಟು ವಿದ್ಯಾರ್ಥಿಗಳು ಉರ್ದು, ಮರಾಠಿ, ತಮಿಳು, ತೆಲುಗು ಶಾಲೆಯಲ್ಲಿ ಓದುತ್ತಿದ್ದಾರೆ.
ಮೂಲ ಸೌಕರ್ಯದ ಕೊರತೆ
ಸರ್ಕಾರಿ ಶಾಲೆಗಳ ನಿರ್ವಹಣೆ ಮಾಡುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಕಳೆದ ಬಾರಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರೇ ಪತ್ರಿಕಾಗೋಷ್ಠಿಯಲ್ಲಿ ಒಪ್ಪಿಕೊಂಡಿದ್ದಾರೆ. ಈ ಹಿಂದೆ ಖಾಸಗಿ ಸಹಭಾಗಿತ್ವದಲ್ಲಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುಲಾಗಿತ್ತು. ಇದೇ ರೀತಿಯಲ್ಲಿ ಕಾರ್ಪೊರೇಟ್ ಕಂಪನಿಗಳು ಮುಂದೆ ಬಂದರೆ ಶಾಲೆಗಳನ್ನು ದತ್ತು ನೀಡಲು ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ಮುಂದೆ ಮೂಲ ಸೌಕರ್ಯ ಕೊರತೆ ನೀಗಿಸಬಹುದು ಎಂಬುವುದು ಸರ್ಕಾರದ ಚಿಂತನೆಯಾಗಿದೆ.
ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಕೇಂದ್ರದಿಂದ ಅನುದಾನ ಪಡೆದುಕೊಳ್ಳಲಾಗುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಸರ್ಕಾರ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಮೊದಲು ಶಾಲೆ ತೊರೆದ ಮಕ್ಕಳನ್ನು ಸಮೀಕ್ಷೆ ನಡೆಸಿ ಆನಂತರ ಕಾರ್ಯಕ್ರಮ ಜಾರಿಗೊಳಿಸಲಾಗುವುದು.
- ಸುಭೋದ್ ಯಾದವ್, ರಾಜ್ಯ ಯೋಜನಾ ನಿರ್ದೇಶಕರು, ಸರ್ವ ಶಿಕ್ಷಣ ಅಭಿಯಾನ
ಶತಮಾನೋತ್ಸವ ಕಂಡ ಶಾಲೆಗಳು.
ಬೆಂಗಳೂರು
ದಕ್ಷಿಣ ವಿಭಾಗ 17
ಬೆಂಗಳೂರು
ಉತ್ತರ ವಿಭಾಗ 14
ಜಿಲ್ಲೆ ಮಂಜೂರು ಕಾರ್ಯನಿರ್ವಹಣೆ
ಬೆಂ ಗ್ರಾ. 12,942 12,377
ಬೆಂಗಳೂರು ನಗರ 77,164 74,936
ದೇವರಾಜ್. ಎಲ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

