ಪ್ರಧಾನ ಸುದ್ದಿ

ಅರಮನೆಯಲ್ಲಿ ಸರಸ್ವತಿ ಪೂಜೆ ಸಲ್ಲಿಸಿದ ಒಡೆಯರ್

Published On :

ಮೈಸೂರು: ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಗುರುವಾರ ಸರಸ್ವತಿ ಪೂಜೆ ಸಲ್ಲಿಸಿದರು.
ದಸರಾ ಮಹೋತ್ಸವ ಅಂಗವಾಗಿ ಖಾಸಗಿ ದರ್ಬಾರ್ ನಡೆಸುತ್ತಿರುವ ಒಡೆಯರ್ ಅವರು ಸಾಂಪ್ರದಾಯಿಕ ಉಡುಪು ಧರಿಸಿ, ಅರಮನೆಯ ಕನ್ನಡಿ ತೊಟ್ಟಿ ಆವರಣದಲ್ಲಿ ಸರಸ್ವತಿ ಪೂಜೆಯನ್ನು ಸಂಪ್ರದಾಯದಂತೆ ಭಕ್ತಿಭಾವದಿಂದ ನೆರವೇರಿಸಿದರು. ನವರಾತ್ರಿ ಅಂಗವಾಗಿ ರಾಜವಂಶಸ್ಥರಿಂದ ಅರಮನೆಯಲ್ಲಿ ವಿಶೇಷ ಧಾರ್ಮಿಕ ಆಚರಣೆಗಳು ಪ್ರತಿ ವರ್ಷ ನಡೆಯುತ್ತಿದೆ. ಕಾಳಿ, ಲಕ್ಷ್ಮಿ, ಸರಸ್ವತಿ ಈ ಮೂರು ರೂಪಗಳಲ್ಲಿ ದೇವಿಯನ್ನು ಆರಾಧಿಸಲಾಗುತ್ತದೆ. ರಾಜವಂಶಸ್ಥರಿಂದ ಪ್ರತಿ ದೇವಿಗೂ ಮೂರು ದಿನಗಳ ಕಾಲ ವಿಶೇಷ ಪೂಜೆ ಸಲ್ಲಿಕೆಯಾಗುತ್ತದೆ. ಅದೇ ರೀತಿ ಮೂಲ ನಕ್ಷತ್ರದಲ್ಲಿ ಸರಸ್ವತಿ ಪೂಜೆ ಸಲ್ಲಿಸಿದರು.
ಮಹಾರಾಜರ ಆಶ್ರಯದಲ್ಲಿರುವ ಓಲೆಗರಿಗಳು, ಧಾರ್ಮಿಕ ಗ್ರಂಥಗಳಿಗೆ ಪ್ರತಿದಿನ ಪೂಜೆ ಸಲ್ಲಿಸಲಾಗುತ್ತದೆ. ತಾಮಸ ಶಕ್ತಿ ನಿರ್ನಾಮ ಮಾಡಲಿ ಎಂದು ಕಾಳಿ ಆರಾಧಿಸಿದರೆ, ಭಾಗ್ಯ ಅಥವಾ ಐಶ್ವರ್ಯ ಕೊಡಲಿ ಎಂದು ಲಕ್ಷ್ಮಿಯನ್ನು ಹಾಗೂ ಜ್ಞಾನ ಕರುಣಿಸಲಿ ಎಂದು ಸರಸ್ವತಿಯನ್ನು ಪೂಜಿಸುವುದು ವಾಡಿಕೆ ಆಗಿದೆ. ಸರಸ್ವತಿ ಪೂಜೆ ಸಲ್ಲಿಕೆ ವೇಳೆ ಆಗಮಿಕರು, ಅರಮನೆ ಸಿಬ್ಬಂದಿ ಸಮವಸ್ತ್ರದಲ್ಲಿ ನೆರೆದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.