ಮಳೆಗೆ ಯುವಕ ಬಲಿ

ಕನ್ನಡಪ್ರಭ ವಾರ್ತೆ, ಬೆಂಗಳೂರು, ಅ.20-
ಕೊಂಚ ಬಿಡುವು ನೀಡಿದ್ದ ಮಳೆರಾಯನ ಆರ್ಭಟ ಮತ್ತೆ ಜೋರಾಗಿದೆ. ಭಾನುವಾರ ರಾಜ್ಯದ ಕೆಲವೆಡೆ ಸುರಿದ ಮಳೆಗೆ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ. ಕೆರೆಗಳಿಗೆ ಕೋಡಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ.
ಅರಕಲಗೂಡು ತಾಲೂಕು ಹಾನಗಲ್ಲು ಗ್ರಾಮದಲ್ಲಿ ಭಾರಿ ಮಳೆಗೆ ಕೆರೆ ಒಡೆದಿದ್ದು ಹಾಲು ಹಾಕಲು ಪಕ್ಕದ ಊರಿಗೆ ಬೈಕ್ನಲ್ಲಿ ತೆರಳುತ್ತಿದ್ದ ರಾಘವೇಂದ್ರ (32) ಎಂಬ ಯುವಕ ಕೊಚ್ಚಿ ಹೋಗಿದ್ದಾನೆ.
ಯುವಕನ ಶವ ಪತ್ತೆಗಾಗಿ ಪೊಲೀಸರು, ಸಾರ್ವಜನಿಕರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಸಂಜೆ ನಾಲ್ಕು ಗಂಟೆ ಸುಮಾರಿಗೆ ಗ್ರಾಮಸ್ಥರ ಶ್ರಮದಿಂದ ಮೃತದೇಹ ಪತ್ತೆಯಾಗಿದೆ. ಕೆರೆ ಒಡೆದಿದ್ದರಿಂದ ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಬೆಳವಾಡಿ ಗ್ರಾಮದ ಹಿರೇಕೆರೆ, ಹಾನುಗಲ್ಲಮ್ಮನ ಕೆರೆ ಕೋಡಿ ಬಿದ್ದಿದ್ದು ಸುತ್ತಲಿನ ಜಮೀನುಗಳು ಜಲಾವೃತವಾಗಿವೆ. ಹಿರೇಕೆರೆಯಲ್ಲಿ ಬಿಡಲಾಗಿದ್ದ ಸುಮಾರು 5 ಲಕ್ಷ ಮೀನಿನ ಮರಿಗಳು ಕೊಚ್ಚಿ ಹೋಗಿವೆ. ಕೋಲಾರ ಜಿಲ್ಲೆಯಲ್ಲೂ ಭಾರಿ ಮಳೆಯಾಗಿದೆ.
ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ರಾಜಕಾಲುವೆಗಳ ಸಮೀಪದ ನಿವಾಸಿಗಳ ರಕ್ಷಣೆಗೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನಲ್ಲಿ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಹಲವು ಮನೆಗಳ ಹೆಂಚು ಹಾಗೂ ಶೀಟುಗಳು ಹಾರಿ ಹೋಗಿವೆ. ಪಾಂಡವಪುರ ಹೊರವಲಯದಲ್ಲಿರುವ ಟ್ರಾನ್ಸ್ಫಾರ್ಮರ್ ನೆಲಕ್ಕುರುಳಿದ್ದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ. ಬೆಂಗಳೂರಿನಲ್ಲೂ ತುಂತುರು ಮಳೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


