ಪ್ರಧಾನ ಸುದ್ದಿ

ಸಚಿವ ಲಾಡ್ ವಿರುದ್ಧ ಇನ್ನೊಂದು ದಾಖಲೆ ಬಿಡುಗಡೆ

Published On :

ಬೆಂಗಳೂರು: ಅಕ್ರಮ ಗಣಿಗಾರಿಕೆ ಸಂಬಂಧ ಸಚಿವ ಸಂತೋಷ್ ಲಾಡ್ ವಿರುದ್ಧ ಸಮರ ಮುಂದುವರಿಸಿರುವ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ್ ಅವರು ಇದೀಗ 126 ಪುಟಗಳ ದಾಖಲೆ ಪತ್ರ ಬಿಡುಗಡೆ ಮಾಡಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ್ ಲಾಡ್ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಮತ್ತು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಯವರಿಗೆ ಪತ್ರ ಬರೆದು ಸೂಕ್ತ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದರು. ಸಂತೋಷ್ ಲಾಡ್ ಅವರಿಗೆ, ಅವರ ವಿಧಾಸೌಧದ ಕಚೇರಿಯಲ್ಲಿ ದಾಖಲೆ ತಲುಪಿಸಲು ಹೋದಾಗ ಅವರ ಆಪ್ತ ಕಾರ್ಯದರ್ಶಿ, ಸಚಿವರು ತೆಗೆದುಕೊಳ್ಳದಂತೆ ತಿಳಿಸಿದ್ದಾರೆ ಎಂದು ಹೇಳಿ ನಿರಾಕರಿಸಿದರು. ಹೀಗಾಗಿ ಅವರಿಗೆ ಸ್ಪೀಡ್ ಪೋಸ್ಟ್ ಮೂಲಕ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸಚಿವ ಸಂತೋಷ್ ಲಾಡ್ ವಿರುದ್ಧ 126 ಪುಟಗಳ ದಾಖಲೆ ಬಿಡುಗಡೆ
15 ಸಂಪುಟಗಳ ಪತ್ರ ಮತ್ತು ಉಳಿದ ದಾಖಲೆಗಳು ಸೇರಿದ 126 ಪುಟಗಳ ಮನವಿಯಲ್ಲಿ ಸಂತೋಷ್ ಲಾಡ್ ಅವರ ಪಾಲುದಾರಿಕೆ ಹೊಂದಿರುವ ಗಣಿಗಾರಿಕೆ ಕಂಪನಿ ವಿ.ಎಸ್.ಲಾಡ್ ಅಂಡ್ ಸನ್ಸ್ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವುದು ರುಜುವಾತಾಗಿದೆ ಎಂದರು.
ಸಚಿವರು ಅಕ್ರಮದಲ್ಲಿ ಭಾಗವಹಿಸಿರುವ ಬಗ್ಗೆ ಮತ್ತು ಅದರ ವಿರುದ್ಧ ಕರ್ನಾಟಕ ಪೊಲೀಸರು ನಡೆಸುತ್ತಿರುವ ತನಿಖೆಯ ಕೇಸ್ ನಂ.132/2008-09 ಮತ್ತು 32/2010-11 ವಿ.ಎಸ್.ಲಾಡ್ ಅಂಡ್ ಸನ್ಸ್ ವಿರುದ್ಧ ದಾಖಲಾಗಿರುವ ಕೇಸ್‌ಗಳಾಗಿದ್ದು, ಇದನ್ನು ಸರ್ಕಾರ ಸಂಪೂರ್ಣ ಗಣನೆಗೆ ತೆಗೆದುಕೊಳ್ಳಬೇಕು. ಈ ಮೂಲಕ ನೈಸರ್ಗಿಕ ಸಂಪತ್ತನ್ನು ಕಾಪಾಡಬೇಕೆಂದು ಮನವಿ ಮಾಡಿದರು.
ಮುಖ್ಯಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಸೂಕ್ತ ದಾಖಲೆಗಳಿಲ್ಲದೇ ಸಂತೋಷ್ ಲಾಡ್ ಮೇಲೆ ಆರೋಪ ಮಾಡುತ್ತಿದ್ದಾರೆ ಎನ್ನುತ್ತಿದ್ದರು.  ಇದಕ್ಕೆ ಪ್ರತಿಯಾಗಿ ಇಂದು ಬಿಡುಗಡೆ ಮಾಡಿರುವ ದಾಖಲೆಗಳು ಉತ್ತರ ನೀಡಿವೆ. ಸರ್ಕಾರ ಇದನ್ನು ಗಣನೆಗೆ ತೆಗೆದುಕೊಂಡು ಈ ಕೂಡಲೇ ಸಂತೋಷ್ ಲಾಡ್  ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.