ಬಾಂಬ್ ಸ್ಫೋಟ ಪ್ರಕರಣ: ಕೋರ್ಟ್ಗೆ ಆರೋಪಿಗಳು ಹಾಜರು
ರಾಮನಗರ: ಚನ್ನಪಟ್ಟಣದಲ್ಲಿ 2008ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಎಲ್ಲ 9 ಆರೋಪಿಗಳನ್ನು ಬಿಗಿ ಭದ್ರತೆಯೊಂದಿಗೆ ಇಲ್ಲಿನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಯಿತು.
ಕೇರಳ ಮೂಲದ ಅಬ್ದುಲ್ ಖಲೀಲ್, ಪಿ.ಮುಜೀಬ್, ಅಬ್ದುಲ್ ಜಬ್ಬಾರ್, ಬದ್ರುದ್ದೀನ್, ಸರ್ಫ್ರಾಜ್ ನವಾಜ್, ಇದಪಾನ್, ಮುನಾಫ್, ಮಹಮದ್ ಸಕಾರಿಯಾ ಮತ್ತು ಇಡಫನ್ ತೊಡಿಕಾ ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಆರೋಪಿಗಳು. ಇವರು ಚನ್ನಪಟ್ಟಣದ ಸ್ಫೋಟದ ಸಂದರ್ಭದಲ್ಲೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯೂ ಬಾಂಬ್ ಸ್ಫೋಟಿಸಿ ಸಿಕ್ಕಿ ಬಿದ್ದು, ಆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು.
ಬಾಡಿ ವಾರೆಂಟ್ ಆಧಾರದ ಮೇಲೆ ಅವರನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ನ್ಯಾಯಾಧೀಶರಾದ ಕೆ.ಸುರೇಶ್ ಅವರು ಇನ್ ಕ್ಯಾಮೆರಾ ಕೋರ್ಟ್ನಲ್ಲಿ ಆರೋಪಿಗಳ ವಿಚಾರಣೆ ನಡೆಸಿದರು.
ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ವಕೀಲರು, ಪೊಲೀಸರು, ಅಗತ್ಯ ಸಿಬ್ಬಂದಿಯಷ್ಟೇ ಕೋರ್ಟ್ ಹಾಲ್ನಲ್ಲಿ ಇದ್ದರು. ಅನ್ಯರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

