ಪ್ರಧಾನ ಸುದ್ದಿ

ಡಿಸಿ ನೇತೃತ್ವದ ತಂಡ ರವಾನೆ

Published On :

ರಾಯಚೂರು: ಬಸ್ ದುರಂತದ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು ಹಾಗೂ ಎಸ್ಪಿ ಎಂ.ಎನ್.ನಾಗರಾಜು ಅವರಿದ್ದ ತಂಡ ತೆರಳಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಳಗ್ಗೆ ಘಟನಾ ಸ್ಥಳಕ್ಕೆ ಈ ಇಬ್ಬರು ಅಧಿಕಾರಿಗಳ ನೇತೃತ್ವದ ತಂಡದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ನಾರಾಯಣಪ್ಪ ಮತ್ತು ವೈದ್ಯಕೀಯ ಸಿಬ್ಬಂದಿ, ಆ್ಯಂಬ್ಯುಲೆನ್ಸ್, ನಾಲ್ವರು ಸಿಪಿಐ ಸೇರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸುಮಾರು 40 ಪೊಲೀಸ್ ಸಿಬ್ಬಂದಿ ತೆರಳಿದರು. ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ಅಧಿಕಾರಿಗಳು, ಬಸ್ನಲ್ಲಿದ್ದ ಕರ್ನಾಟಕದ ಪ್ರಯಾಣಿಕರ ದೇಹಗಳನ್ನು ಅವರ ಸಂಬಂಧಿಕರಿಗೆ ಒಪ್ಪಿಸುವುದು ಹಾಗೂ ದುರಂತದಲ್ಲಿ ಸಜೀವ ದಹನಗೊಂಡವರ ಸಂಬಂಧಿಗಳಿಗೆ ನೆರವಾಗುವ ಕಾರ್ಯದಲ್ಲಿ ನೆರವಾಗಲು ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆಂದು ಜಿಲ್ಲಾಡಳಿತ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.